ಪ್ರಧಾನ ಸುದ್ದಿ

ವಿಧಾನಸೌಧ ಸುತ್ತ 5 ಕಿಮೀ ವ್ಯಾಪ್ತಿಯಲ್ಲಿ ಸಿಸಿಟಿವಿ ಅಳವಡಿಕೆ: ಸಿಎಂ

ವಿಧಾನಸೌಧದ ಸುತ್ತ ಐದು ಕಿ.ಮೀ. ವ್ಯಾಪ್ತಿಯಲ್ಲಿ ಸಿಸಿಟಿವಿ ಅಳವಡಿಸಲಾಗುವುದು ಮತ್ತು ನಗರದ ಹೋಟೆಲ್ ಹಾಗೂ ಮಾಲ್‌ಗಳಲ್ಲಿ ಸಿಸಿಟಿವಿ..

ವಿಧಾನಸೌಧ ಸುತ್ತ 5 ಕಿಮೀ ವ್ಯಾಪ್ತಿಯಲ್ಲಿ ಸಿಸಿಟಿವಿ ಅಳವಡಿಕೆ: ಸಿಎಂ
ಸಿದ್ದರಾಮಯ್ಯ
Published On :

ಬೆಂಗಳೂರು: ವಿಧಾನಸೌಧದ ಸುತ್ತ ಐದು ಕಿ.ಮೀ. ವ್ಯಾಪ್ತಿಯಲ್ಲಿ ಸಿಸಿಟಿವಿ ಅಳವಡಿಸಲಾಗುವುದು ಮತ್ತು ನಗರದ ಹೋಟೆಲ್ ಹಾಗೂ ಮಾಲ್‌ಗಳಲ್ಲಿ ಸಿಸಿಟಿವಿ ಅಳವಡಿಕೆ ಕಡ್ಡಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.

ಬೆಂಗಳೂರಿನ ಚರ್ಚ್ ಸ್ಟ್ರೀಟ್ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉನ್ನತ ಮಟ್ಟದ ಸಭೆ ನಡೆಸಿದರು.

ಸಭೆಯ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ನಿನ್ನೆ ರಾತ್ರಿ 8.30ರ ಸುಮಾರಿಗೆ ಬಾಂಬ್ ಸ್ಫೋಟ ನಡೆದಿದ್ದು, ಸ್ಫೋಟದಲ್ಲಿ ಓರ್ವ ಮಹಿಳೆ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಮೃತಪಟ್ಟ ಭವಾನಿ ಕುಟುಂಬಕ್ಕೆ ಈಗಾಗಲೇ ಪರಿಹಾರ ಘೋಷಿಸಲಾಗಿದೆ ಮತ್ತು ಮರಣೋತ್ತರ ಪರೀಕ್ಷೆಯ ಬಳಿಕ ಮೃತದೇಹವನ್ನು ಚೆನ್ನೈಗೆ ರವಾನಿಸುವ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದರು.

ಬೆಂಗಳೂರಿನಲ್ಲಿ ಈ ಹಿಂದೆಯೂ ಸ್ಫೋಟ ಸಂಭವಿಸಿದೆ. 2008, 2010 ಹಾಗೂ 2013ರಲ್ಲಿ ಮಲ್ಲೇಶ್ವರಂನ ಬಿಜೆಪಿ ಕಚೇರಿ ಬಳಿ ಬಾಂಬ್ ಸ್ಫೋಟ ಸಂಭವಿಸಿತ್ತು. ಈ ಎಲ್ಲಾ ಘಟನೆಗಳ ನಂತರ ನಗರದ ಜನಸಂದಣಿ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಈಗ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸುವಂತೆ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. ಅಲ್ಲದೆ ಸಾರ್ವಜನಿಕರ ಸುರಕ್ಷತೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಸಿಎಂ ಹೇಳಿದರು.

ಸ್ಫೋಟ ಸಂದರ್ಭಗಳಲ್ಲಿ ಸಾರ್ವಜನಕರ ಸಹಕಾರ ಬೇಕು, ಅನುಮಾಸ್ಪದ ವ್ಯಕ್ತಿಗಳು ಕಂಡುಬಂದರೆ ಮಾಹಿತಿ ನೀಡಬೇಕೆಂದು ಸಿದ್ದರಾಮಯ್ಯ ಮನವಿ ಮಾಡಿದರು. ಅಲ್ಲದೆ ಮಾಹಿತಿ ನೀಡುವವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ಸಿಎಂ ತಿಳಿಸಿದರು.

ಸ್ಫೋಟದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ರಾಜ್ಯ ಹಾಗೂ ಕೇಂದ್ರ ಗುಪ್ತದಳ ಸ್ಫೋಟದ ಕುರಿತು ಮಾಹಿತಿ ಸಂಗ್ರಹಿಸುತ್ತಿವೆ. ನಿಷೇಧಿತ ಸಂಘಟನೆಗಳು ಸೇರಿದಂತೆ ಎಲ್ಲಾ ಆಯಾಮಗಳ ಕುರಿತು ತನಿಖೆ ನಡೆಸಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.