೧೩೦ನೆ ಕಾಂಗ್ರೆಸ್ ಸಂಸ್ಥಾಪನ ದಿನಾಚರಣೆ: ರಾಹುಲ್ ಗೈರು
ಕಾಂಗ್ರೆಸ್ ಪಕ್ಷ ದೇಶದಾದ್ಯಂತ ನೆಲೆ ಕಳೆದುಕೊಳ್ಳುತ್ತಿರುವ...

ನವದೆಹಲಿ: ಕಾಂಗ್ರೆಸ್ ಪಕ್ಷ ದೇಶದಾದ್ಯಂತ ನೆಲೆ ಕಳೆದುಕೊಳ್ಳುತ್ತಿರುವ ಹಾಗೂ ಚುನಾವಣೆಗಳಲ್ಲಿ ಈ ವರ್ಷ ನೀಡುತ್ತಿರುವ ಕಳಪೆ ಪ್ರದರ್ಶನದ ನಡುವೆ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ನ ೧೩೦ ನೆ ಸಂಸ್ಥಾಪನಾ ದಿನಾಚರಣೆಯನ್ನು ಪಕ್ಷ ಆಚರಿಸಿದೆ.
ದೇಶದ ರಾಜಧಾನಿಯ ಅಖಿಲ ಭಾರತೀಯ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯಾಲಯದಲ್ಲಿ ನಡೆದ ಈ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ. ಕಾರ್ಯಕ್ರಮದಲ್ಲಿ ಹಿರಿಯ ನಾಯಕರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಗುಲಾಂ ನಬಿ ಆಜಾದ್, ಅಂಬಿಕಾ ಸೋನಿ ಮತ್ತು ಶೀಲಾ ದೀಕ್ಷಿತ್ ಭಾಗವಹಿಸಿದ್ದರು.
ಹಿರಿಯ ಕಾಂಗ್ರೆಸ್ ನಾಯಕರಾದ ಎ ಕೆ ಆಂಟನಿ ಮತ್ತು ಮೋತಿಲಾಲ್ ವೋಹ್ರಾ ಕೂಡ ಭಾಗವಹಿಸಿದ್ದ ಈ ಕಾರ್ಯಕ್ರಮದಲ್ಲಿ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ಗೈರುಹಾಜರಿ ಎದ್ದು ಕಾಣುತ್ತಿತ್ತು.
ಜಮ್ಮು ಕಾಶ್ಮೀರದಲ್ಲಿ ಸರ್ಕಾರ ರಚನೆಗೆ ಪಿಡಿಪಿ ಪಕ್ಷಕ್ಕೆ ಬೆಂಬಲ ನೀಡುವ ಪ್ರಶ್ನೆಗೆ ಮುಗುಳ್ನಕ್ಕಿ ಸೋನಿಯಾ ಗಾಂಧಿ ಮುನ್ನಡೆದರು ಎಂದು ತಿಳಿದುಬಂದಿದೆ. ೧೩೧ನೆ ವರ್ಷಕ್ಕೆ ಕಾಲಿಟ್ಟಿರುವ ಕಾಂಗ್ರೆಸ್ ಪಕ್ಷವನ್ನು ಮತ್ತೆ ಜನರ ಹತ್ತಿರ ಕೊಂಡೊಯ್ಯಲು, ತಳಮಟ್ಟದಿಂದ ಮತ್ತೆ ಕಾಂಗ್ರೆಸ್ ಪಕ್ಷ ಬೆಳೆಸಲು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


