ಪ್ರಧಾನ ಸುದ್ದಿ

ರಾಷ್ಟ್ರಪತಿ ಭೇಟಿ ಮಾಡಿದ ಮೋದಿ, ಭಾನುವಾರ ಸಂಪುಟ ವಿಸ್ತರಣೆ?

ಕೊನೆಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಸಚಿವ ಸಂಪುಟ ವಿಸ್ತರಣೆಗೆ ಮುಂದಾಗಿದ್ದು, ಈ ಸಂಬಂಧ...

ರಾಷ್ಟ್ರಪತಿ ಭೇಟಿ ಮಾಡಿದ ಮೋದಿ, ಭಾನುವಾರ ಸಂಪುಟ ವಿಸ್ತರಣೆ?
ನರೇಂದ್ರ ಮೋದಿ- ಪ್ರಣಬ್ ಮುಖರ್ಜಿ
Published On :

ನವದೆಹಲಿ: ಕೊನೆಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಸಚಿವ ಸಂಪುಟ ವಿಸ್ತರಣೆಗೆ ಮುಂದಾಗಿದ್ದು, ಈ ಸಂಬಂಧ ಗುರುವಾರ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಭೇಟಿ ಚರ್ಚಿಸಿದ್ದಾರೆ.

ಸುಧಾರಣೆ ಮತ್ತು ಆಡಳಿತ ಯಂತ್ರಕ್ಕೆ ಚುರುಕು ನೀಡಲು ನಿರ್ಧರಿಸಿರುವ ಮೋದಿ, ಇದೇ ಭಾನುವಾರ ತಮ್ಮ ಸಂಪುಟ ವಿಸ್ತರಣೆ ಮಾಡಲಿದ್ದಾರೆ ಎನ್ನಲಾಗಿದೆ.

ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್, ಬಿಜೆಪಿ ಹಿರಿಯ ನಾಯಕ ಯಶ್ವಂತ್ ಸಿನ್ಹಾ ಪುತ್ರ ಜಯಂತ್ ಸಿನ್ಹಾ ಹಾಗೂ ಕಲ್ಲಿದ್ದಲು ಹಗರಣ ಬಯಲಿಗೆಳೆದ ಖ್ಯಾತಿಯ ಚಂದ್ರಾಪುರ ಸಂಸದ ಹಂಸರಾಜ್ ಅಹಿರ್ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಸಾಧ್ಯತೆ ಇದೆ. ಮೋದಿ ಆಪ್ತರೂ ಆಗಿರುವ ಪರಿಕ್ಕರ್ ಅವರಿಗೆ ರಕ್ಷಣಾ ಹೊಣೆ ವಹಿಸುವುದು ಬಹುತೇಕ ಖಚಿತ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.