ಪ್ರಧಾನ ಸುದ್ದಿ

ಹೈವೇಗಳಲ್ಲಿನ ಮದ್ಯದಂಗಡಿಗಳನ್ನು ಸ್ಥಳಾಂತರಿಸಿ: ಕೇರಳ ಹೈಕೋರ್ಟ್

ರಾಷ್ಟ್ರೀಯ ಹೈವೇಗಳಲ್ಲಿ ಮತ್ತು ಸರ್ವೀಸ್ ರಸ್ತೆಗಳಲ್ಲಿರುವ ರಾಜ್ಯ ಸರ್ಕಾರದ ಒಡೆತನದ...

ಹೈವೇಗಳಲ್ಲಿನ ಮದ್ಯದಂಗಡಿಗಳನ್ನು ಸ್ಥಳಾಂತರಿಸಿ: ಕೇರಳ ಹೈಕೋರ್ಟ್
ಸಾಂದರ್ಭಿಕ ಚಿತ್ರ
Published On :

ಕೊಚ್ಚಿ: ರಾಷ್ಟ್ರೀಯ ಹೈವೇಗಳಲ್ಲಿ ಮತ್ತು ಸರ್ವೀಸ್ ರಸ್ತೆಗಳಲ್ಲಿರುವ ರಾಜ್ಯ ಸರ್ಕಾರದ ಒಡೆತನದ ಎಲ್ಲ ಮದ್ಯದಂಗಡಿಗಳನ್ನು ಸ್ಥಳಾಂತರಿಸಲು ಕ್ರಮ ಕೈಗೊಳ್ಳುವಂತೆ ಕೇರಳ ಉಚ್ಛ ನ್ಯಾಯಾಲಯ ಸೋಮವಾರ ಕೇರಳ ಸರ್ಕಾರಕ್ಕೆ ನಿರ್ದೇಶಿಸಿದೆ.

ಬೆವೆರೇಜಸ್ ಕಾರ್ಪೋರೇಶನ್ ನಡೆಸುವ ಈ ಮದ್ಯದಂಗಡಿಗಳಿಂದ ವಾಹನ ದಟ್ಟನೆ ಹೆಚ್ಚಾಗುತ್ತಿದೆ ಮತ್ತು ಅಪಘಾತಗಳು ಕೂಡ ಹೆಚ್ಚಿವೆ ಎಂದು ಕಾರುಂಗಪಲ್ಲಿಯ ಪಿ ಕೆ ಮೊಹಮದ್ ಸಲ್ಲಿಸಿದ್ದ ಸಾರ್ವಜನಿಕ ಅರ್ಜಿಯನ್ನು ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಾಧೀಶ ಅಶೋಕ್ ಭೂಷಣ್, ನ್ಯಾಯಾಧೀಶ ಎ ಎಂ ಶಫೀಕ್ ಒಳಗೊಂಡ ವಿಭಾಗೀಯ ಪೀಠ ಸರ್ಕಾರಕ್ಕೆ ಈ ನಿರ್ದೇಶನ ನೀಡಿದೆ.

ಮೂರು ವಾರಗಳಲ್ಲಿ ಈ ಕೆಲಸದ ಪ್ರಗತಿಯನ್ನು ತಿಳಿಸುವಂತೆ ಸರ್ಕಾರಕ್ಕೆ ಸೂಚಿಸಿದೆ.

ಕೇರಳ ಬೆವೆರೇಜಸ್ ಕಾರ್ಪೋರೇಶನ್ ಪ್ರಕಾರ ರಾಷ್ಟ್ರ ಮತ್ತು ರಾಜ್ಯ ಹೈವೇಗಳಲ್ಲಿ ೧೬೯ ಮದ್ಯದಂಗಡಿಗಳಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.