ಪ್ರಧಾನ ಸುದ್ದಿ

ಆಸ್ಟ್ರೇಲಿಯಾ ಸಂಸತ್‌ನಲ್ಲಿ ಪ್ರಧಾನಿ ಮೋದಿ ಭಾಷಣ

10 ದಿನಗಳ ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಆಸ್ಟ್ರೇಲಿಯಾ ಸಂಸತ್‌ಗೆ ...

ಆಸ್ಟ್ರೇಲಿಯಾ ಸಂಸತ್‌ನಲ್ಲಿ ಪ್ರಧಾನಿ ಮೋದಿ ಭಾಷಣ
ನರೇಂದ್ರ ಮೋದಿ
Published On :

ಕ್ಯಾನ್‌ಬೆರಾ:  10 ದಿನಗಳ ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಆಸ್ಟ್ರೇಲಿಯಾ ಸಂಸತ್‌ಗೆ ಭೇಟಿ ನೀಡಿ ಭಾಷಣ ಮಾಡಿದ್ದಾರೆ. ಮೊದಲಿಗೆ ಆಸ್ಟ್ರೇಲಿಯಾ ಪ್ರಧಾನಿ ಟೋನಿ ಅಬೋಟ್ ಜತೆ ಮಾತುಕತೆ ನಡೆಸಿದ ಮೋದಿ, ಭಾರತದ ಅಭಿವೃದ್ಧಿಗೆ ಆಸ್ಟ್ರೇಲಿಯಾದ ಸಹಕಾರ ಬೇಕು ಎಂದು ಹೇಳಿದ್ದಾರೆ.

ಭಾರತದ ಪ್ರಧಾನಿಯೊಬ್ಬರು ಆಸ್ಟ್ರೇಲಿಯಾದ ಸಂಸತ್‌ನ್ನು ಉದ್ದೇಶಿಸಿ ಮಾತನಾಡಿದ್ದು ಇದೇ ಮೊದಲ ಬಾರಿಯಾಗಿದೆ.

ಸಂಸತ್‌ಗೆ ಭೇಟಿ ನೀಡಿದ ಮೋದಿ ಅವರಿಗೆ ಟೋನಿ ಅಬೋಟ್ ಸ್ವಾಗತ ಕೋರಿ, ಮೊದಲನೇ ವಿಶ್ವಯುದ್ಧದ ಪ್ರತಿರೂಪದ ಕಾಣಿಕೆಯನ್ನು ನೀಡಿದ್ದಾರೆ.

ಸಂಸತ್‌ನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಅಲ್ಲಿನ ಮೂಲ ನಿವಾಸಿಗಳಿಗೆ ನಮನ ಸಲ್ಲಿಸಿ ಮಾತು ಆರಂಭಿಸಿದ್ದಾರೆ. ಭಾರತದ 125 ಕೋಟಿ ಜನರ ಪ್ರತಿನಿಧಿಯಾಗಿ ನಾನು ಆಸ್ಟ್ರೇಲಿಯಾಕ್ಕೆ ಆಗಮಿಸಿದ್ದೇನೆ. ಪ್ರಜಾಪ್ರಭುತ್ವವು ಉಭಯ ದೇಶಗಳನ್ನು ಬೆಸೆದಿದ್ದು,  ಭಾರತದ ಅಭಿವೃದ್ಧಿಗೆ ಆಸ್ಟ್ರೇಲಿಯಾದ ಸಹಕಾರ ಬೇಕು ಎಂದಿದ್ದಾರೆ.

ಉಗ್ರವಾದವನ್ನು ಹತ್ತಿಕ್ಕಲು ಜಗತ್ತಿನ ರಾಷ್ಟ್ರಗಳು ಒಗ್ಗೂಡಬೇಕು ಎಂದು ಹೇಳಿದ ಮೋದಿ, ಭಾರತದ ಪ್ರಧಾನಮಂತ್ರಿಯೊಬ್ಬರಿಗೆ ಇಲ್ಲಿಗೆ ಬರಲು 28 ವರ್ಷಗಳೇ ಬೇಕಾಯಿತು. ಅಂದರೆ ಇದೊಂದು ಬದಲಾವಣೆಯ ಪರ್ವ. ನಾವು ಭಾರತದಲ್ಲಿ ಉಗ್ರವಾದದ ಕರಾಳ ಮುಖವನ್ನು ಹತ್ತಿರದಿಂದ ನೋಡಿದ್ದೇವೆ. ಉಗ್ರವಾದವು ಬೃಹತ್ ರೂಪ ತಾಳುತ್ತಿದ್ದು, ತನ್ನ ವ್ಯಾಪ್ತಿಯನ್ನು ವಿಸ್ತರಿಸುತ್ತದೆ. ಹೀಗಿರುವಾಗ ಉಗ್ರವಾದವನ್ನು ನಿಯಂತ್ರಿಸಲು ಎಲ್ಲರೂ ಒಂದಾಗಬೇಕಾಗಿದೆ ಎಂದು ಕರೆ ನೀಡಿದ್ದಾರೆ.









Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.