ಪ್ರಧಾನ ಸುದ್ದಿ

ಭಾರತಕ್ಕೆ 'ಬರಾಕ್‌' ಒಪ್ಪಿದ್ರು: ದ್ವಿಪಕ್ಷೀಯ ಬಾಂಧವ್ಯ ಮತ್ತಷ್ಟು ವೃದ್ಧಿ

ಮುಂದಿನ ವರ್ಷ ಜನವರಿ 25ರಂದು 65ನೇ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಲು ಅಮೆರಿಕ...

ಭಾರತಕ್ಕೆ 'ಬರಾಕ್‌' ಒಪ್ಪಿದ್ರು: ದ್ವಿಪಕ್ಷೀಯ ಬಾಂಧವ್ಯ ಮತ್ತಷ್ಟು ವೃದ್ಧಿ
ನರೇಂದ್ರ ಮೋದಿ - ಬರಾಕ್ ಒಬಾಮ
Published On :

ವಾಷಿಂಗ್‌ಟನ್/ನವದೆಹಲಿ: ಮುಂದಿನ ವರ್ಷ ಜನವರಿ 26ರಂದು 65ನೇ ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಲು ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಒಪ್ಪಿಗೆ ಸೂಚಿಸಿದ್ದು, ಇದು ಭಾರತ-ಅಮೆರಿಕ ನಡುವಿನ ದ್ವಿಪಕ್ಷೀಯ ಬಾಂಧವ್ಯ ವೃದ್ಧಿಗೆ ಉತ್ತಮ ವೇದಿಕೆಯಾಗಲಿದೆ ಎಂದು ಅಮೆರಿಕದ ಹಿರಿಯ ಅಧಿಕಾರಿಗಳು ಹಾಗೂ ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆಯಷ್ಟೇ ಬರಾಕ್ ಒಬಾಮ ಅವರಿಗೆ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ಆಹ್ವಾನ ನೀಡಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ ನರೇಂದ್ರ ಮೋದಿ ಅವರ ಆಹ್ವಾನವನ್ನು ಸ್ವೀಕರಿಸಿರುವ ಬರಾಕ್ ಒಬಾಮ ಅವರು ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ವೈಟ್ ಹೌಸ್ ಅಧಿಕೃತ ಹೇಳಿಕೆ ನೀಡಿದೆ.

ಒಬಾಮ ಅವರು ದೇಶದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಿರುವ ಅಮೆರಿಕದ ಮೊದಲ ಅಧ್ಯಕ್ಷರಾಗಲಿದ್ದಾರೆ.

ಇನ್ನು ಈ ಬಗ್ಗೆ ಟ್ವೀಟ್ ಮಾಡಿರುವ ಅಮೆರಿಕ ರಾಷ್ಟ್ರೀಯ ಭದ್ರತಾ ಸಲಹೆಗಾರ್ತಿ ಸುಸಾನ್ ರೈಸ್ ಅವರು, ಅಮೆರಿಕದ ಅಧ್ಯಕ್ಷರೊಬ್ಬರು ಮೊದಲ ಬಾರಿಗೆ ಭಾರತದ ಗಣರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದು, ಭಾರತ-ಅಮೆರಿಕ ನಡುವಿನ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸಲು ಮತ್ತು ಅದನ್ನು ಮುಂದುವರೆಸಿಕೊಂಡು ಹೋಗಲು ನಾವು ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.

ಭಾರತದ ಗಣರಾಜ್ಯೋತ್ಸವದಲ್ಲಿ ಭಾಗವಹಿಸಲು ಅಮೆರಿಕ ಅಧ್ಯಕ್ಷರು ಜನರವರಿಯಲ್ಲಿ ಭಾರತದ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಅಮೆರಿಕದ ಅಧ್ಯಕ್ಷರು ಭಾರತದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದ್ದು, ಇದು ಎರಡು ರಾಷ್ಟ್ರಗಳ ನಡುವಿನ ಉತ್ತಮ ಬಾಂಧವ್ಯವನ್ನು ಸೂಚಿಸುತ್ತದೆ ಎಂದು ಅಮೆರಿಕದ ಉಪ ರಾಷ್ಟ್ರೀಯ ಭದ್ರತಾ ಸಲಹೆಗಾರ ಹಾಗೂ ಒಬಾಮ ಅವರ ಆಪ್ತ ಬೆನ್ ರೋಡ್ಸ್ ಅವರು ಟ್ವಿಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.