ದೇಶ ಮುನ್ನಡೆಸುವುದು ಎಲ್ಲ ಸಂಸದರ ಜವಾಬ್ದಾರಿ: ಮೋದಿ
ಇಂದಿನಿಂದ ಸಂಸತ್‌ನ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ..

ನವದೆಹಲಿ: ಇಂದಿನಿಂದ ಸಂಸತ್‌ನ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶ ಮುನ್ನಡೆಸುವುದು ಎಲ್ಲ ಸಂಸದರ ಜವಾಬ್ದಾರಿ ಎಂದು ಹೇಳುವ ಮೂಲಕ, ಜವಾಬ್ದಾರಿಯಿಂದ ವರ್ತಿಸುವಂತೆ ಪರೋಕ್ಷವಾಗಿ ಪ್ರತಿಪಕ್ಷಗಳಿಗೆ ಸೂಚಿಸಿದ್ದಾರೆ.
ಚಳಿಗಾಲದ ಅಧಿವೇಶನಕ್ಕೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಮೋದಿ, 'ಸರ್ಕಾರ ನಡೆಸುವ ಜವಾಬ್ದಾರಿಯನ್ನು ಜನ ನಮಗೆ ನೀಡಿದ್ದಾರೆ. ಆದರೆ ದೇಶ ಮುನ್ನಡೆಸುವ ಜವಾಬ್ದಾರಿ ಎಲ್ಲ ಸಂಸದರ ಮೇಲಿದೆ' ಎಂದು ಹೇಳಿದ್ದಾರೆ.
'ಈ ತಂಪಾದ ವಾತಾವರಣದಲ್ಲಿ, ಕೂಲ್ ಆಗಿಯೇ ನಾವು ಸಾಕಷ್ಟು ಕೆಲಸ ಮಾಡಬೇಕಾಗಿದೆ. ಅಧಿವೇಶನ ಸುಗಮವಾಗಿ ನಡೆಯಲಿದೆ ಎಂಬ ವಿಶ್ವಾಸವಿದೆ' ಎಂದು ಪ್ರಧಾನಿ ತಿಳಿಸಿದರು. ಅಲ್ಲದೆ ಪ್ರತಿಪಕ್ಷಗಳು ಸಹ ಉತ್ತಮ ಚರ್ಚೆಗೆ ಅವಕಾಶ ನೀಡಲಿವೆ ಎಂಬ ವಿಶ್ವಾಸವಿದೆ ಎಂದರು.
ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಡೆಯುತ್ತಿರುವ ಎರಡನೇ ಅಧಿವೇಶನ ಇದಾಗಿದ್ದು, ಚಳಿಗಾಲದ ಅಧಿವೇಶನವಾದರೂ ಸಂಸತ್‌ನಲ್ಲಿ ಬಿಸಿ ಬಿಸಿ ಚರ್ಚೆಗಳೇ ಹೆಚ್ಚು ನಡೆಯುವ ಸಾಧ್ಯತೆ ಇದೆ. ಪ್ರತಿಪಕ್ಷಗಳ ವಿರೋಧದ ನಡುವೆಯೂ ಸರ್ಕಾರ ಕೆಲವೊಂದು ಮಹತ್ವಾಕಾಂಕ್ಷಿ ಆರ್ಥಿಕ ಅಜೆಂಡಾಗಳನ್ನು ಪೂರ್ಣಗೊಳಿಸುವ ನಿರೀಕ್ಷೆಯಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


