ಪ್ರಧಾನ ಸುದ್ದಿ

ಕಾಶ್ಮೀರ ಸಮಸ್ಯೆ ಪರಿಹಾರಕ್ಕೆ ಅರ್ಥಪೂರ್ಣ ಮಾತುಕತೆ ಅಗತ್ಯ : ನವಾಜ್ ಶರೀಫ್

ಪಾಕಿಸ್ತಾನ ಮತ್ತು ಭಾರತ ನಡುವಿನ ಮಾತುಕತೆ ನಡೆದಾಗಲೆಲ್ಲಾ ನಾವು ಕಾಶ್ಮೀರದ ನಾಯಕರ ಜತೆ ಮಾಕುಕತೆ ನಡೆಸುತ್ತಾ....

ಕಾಶ್ಮೀರ ಸಮಸ್ಯೆ ಪರಿಹಾರಕ್ಕೆ ಅರ್ಥಪೂರ್ಣ ಮಾತುಕತೆ ಅಗತ್ಯ : ನವಾಜ್ ಶರೀಫ್
ನವಾಜ್ ಶರೀಫ್
Published On :
ಇಸ್ಲಾಮಾಬಾದ್: ಪಾಕಿಸ್ತಾನ ಮತ್ತು ಭಾರತ ನಡುವಿನ ಮಾತುಕತೆ ನಡೆದಾಗಲೆಲ್ಲಾ ನಾವು ಕಾಶ್ಮೀರದ ನಾಯಕರ ಜತೆ ಮಾಕುಕತೆ ನಡೆಸುತ್ತಾ ಬಂದಿದ್ದೇವೆ. ಕಾಶ್ಮೀರ ಸಮಸ್ಯೆಯ ಬಗ್ಗೆ ಅಲ್ಲಿನ ನಾಯಕರ ಅಭಿಪ್ರಾಯಗಳನ್ನು ಕೇಳುವುದರಲ್ಲಿ ಹೊಸತೇನೂ ಇಲ್ಲ ಎಂದು ಪಾಕ್ ಪ್ರಧಾನಿ ನವಾಜ್ ಶರೀಫ್ ಹೇಳಿದ್ದಾರೆ.
18ನೇ ಸಾರ್ಕ್ ಶೃಂಗಸಭೆಯಲ್ಲಿ ಭಾಗವಹಿಸಿ ಮರಳುತ್ತಿದ್ದ ವೇಳೆ ಶರೀಫ್‌ಈ ಮಾತುಗಳನ್ನಾಡಿದ್ದಾರೆ.
ನವದೆಹಲಿಯಲ್ಲಿ ಪಾಕಿಸ್ತಾನ್ ಹೈ ಕಮಿಷನರ್ ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕರೊಂದಿಗೆ ಮಾತುಕತೆ ನಡೆಸುವುದಾಗಿ ತೀರ್ಮಾನಿಸಿಸಲಾಗಿತ್ತು. ಆದರೆ ವಿದೇಶಾಂಗ ಕಾರ್ಯದರ್ಶಿ ಸುಜಾತಾ ಸಿಂಗ್ ಸೆಪ್ಟೆಂಬರ್‌ನಲ್ಲಿ ಇಸ್ಲಾಮಾಬಾದ್‌ಗೆ ಭೇಟಿ ನೀಡಿದ್ದರ ಹಿನ್ನೆಲೆಯಲ್ಲಿ ಈ ಮಾತುಕತೆಯನ್ನು ರದ್ದು ಮಾಡಲಾಗಿತ್ತು.
ಈ ಬಗ್ಗೆ ಶರೀಫ್ ಅವರಲ್ಲಿ ಕೇಳಿದಾಗ, ಭಾರತ ವಿದೇಶಾಂಗ ಕಾರ್ಯದರ್ಶಿ ಜತೆಗಿನ ಮಾತುಕತೆಯನ್ನು ರದ್ದು ಮಾಡಿದ್ದು, ಕಾಶ್ಮೀರಿ ನಾಯಕರ ಜತೆಗೆ ಮಾತನಾಡುವುದರಲ್ಲಿ ಹೊಸತೇನೂ ಇರಲಿಲ್ಲ ಎಂಬ ಕಾರಣಕ್ಕಾಗಿಯೇ ಎಂದು ಶರೀಫ್ ಹೇಳಿದ್ದಾರೆ.
ನಾವು ಭಾರತದೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದು, ನಾವಿದನ್ನು ಕಾಪಾಡಿಕೊಳ್ಳಲು ಬದ್ಧರಾಗಿದ್ದೇವೆ ಎಂದು ಹೇಳಿದ ಶರೀಫ್,ಕಾಶ್ಮೀರ ಸಮಸ್ಯೆಯ ಬಗ್ಗೆ ಅರ್ಥ ಪೂರ್ಣವಾದ ಮಾತುಕತೆ ನಡೆದರೆ ಮಾತ್ರ ಪ್ರಸ್ತುತ ಸಮಸ್ಯೆಯನ್ನು ಪರಿಹರಿಸಲು ಸಾಧ್ಯ. ಆದಾಗ್ಯೂ ಈ ಬಗ್ಗೆ ಉಭಯ ರಾಷ್ಟ್ರಗಳು ಹೆಚ್ಚಿನ ಮುತುವರ್ಜಿ ವಹಿಸಿವೆ ಎಂದು ಪಾಕ್ ಪ್ರಧಾನಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.