ಬೆಳಗಾವಿ ಅಧಿವೇಶನಕ್ಕೂ ಮುನ್ನ ಸಂಪುಟ ಪುನಾರಚನೆ ಮಾಡಿ: ಸಿಎಂಗೆ ದಿಗ್ಗಿ ಸೂಚನೆ
ಪದೇಪದೆ ಒಂದಲ್ಲ ಒಂದು ಕಾರಣ ನೀಡಿ ಸಂಪುಟ ಪುನಾರಚನೆಯನ್ನು ಮುಂದೂಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ...

ಬೆಂಗಳೂರು: ಪದೇಪದೆ ಒಂದಲ್ಲ ಒಂದು ಕಾರಣ ನೀಡಿ ಸಂಪುಟ ಪುನಾರಚನೆಯನ್ನು ಮುಂದೂಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆಯ ಬಗ್ಗೆ ತೀವ್ರ ಅಸಮಾಧಾನಗೊಂಡಿರುವ ಕಾಂಗ್ರೆಸ್ ಹೈಕಮಾಂಡ್, ಚಳಿಗಾಲದ ಅಧಿವೇಶನಕ್ಕು ಮುನ್ನವೇ ಸಂಪುಟ ಪುನಾರಚನೆ ಮಾಡುವಂತೆ ಸಿಎಂಗೆ ಕಟ್ಟು ನಿಟ್ಟಿನ ಸೂಚನೆ ನೀಡಿದೆ.
ಡಿಸೆಂಬರ್ 9ರಿಂದ ಬೆಳಗಾವಿಯಲ್ಲಿ ಆರಂಭವಾಗಲಿರುವ ಚಳಿಗಾಲದ ಅಧಿವೇಶನಕ್ಕು ಮುನ್ನವೆ ಸಂಪುಟ ಪುನಾರಚನೆ ಮಾಡುವಂತೆ ರಾಜ್ಯ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಅವರು ಸಿದ್ದರಾಮಯ್ಯ ಅವರಿಗೆ ಗುರುವಾರ ದೂರವಾಣಿ ಮೂಲಕ ಸೂಚಿಸಿದ್ದಾರೆ ಎಂದು ಪಕ್ಷದ ಉನ್ನತ ಮೂಲಗಳು ತಿಳಿಸಿವೆ.
'ಬೆಳಗಾವಿ ಅಧಿವೇಶನಕ್ಕು ಮುನ್ನ ಸಂಪುಟ ಪುನಾರಚನೆ ಮಾಡುವಂತೆ ಸಿದ್ದರಾಮಯ್ಯಗೆ ಸೂಚಿಸುವಂತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ತಮಗೆ ಹೇಳಿದ್ದಾರೆ. ಅದನ್ನು ನಾನು ನಿಮಗೆ ತಿಳಿಸುತ್ತಿದ್ದೇನೆ' ಎಂದು ದಿಗ್ವಿಜಯ್ ಸಿಂಗ್ ಸಿಎಂಗೆ ಹೇಳಿದ್ದಾರೆ.
ಮೂಲಗಳ ಪ್ರಕಾರ, ಸಂಪುಟದಲ್ಲಿರುವ ಕೆಲವು ಅಸಮರ್ಥ ಸಚಿವರಿಂದ ಪಕ್ಷ ಕಟ್ಟಲು ಸಾಧ್ಯವಿಲ್ಲ ಎಂಬುದನ್ನು ಗಮನದಲ್ಲಿಟ್ಟುಕೊಂಡು ಕೆಲವು ಸಚಿವರನ್ನು ಸಂಪುಟದಿಂದ ಕೈ ಬಿಟ್ಟು, ಸಮರ್ಥರಿಗೆ ಅವಕಾಶ ನೀಡಲು ಹೈಕಮಾಂಡ್ ನಿರ್ಧರಿಸಿದೆ ಎನ್ನಲಾಗಿದೆ. ಅಲ್ಲದೆ ಕನಿಷ್ಠ 10 ಸಚಿವರನ್ನು ಸಂಪುಟದಿಂದ ಕೈ ಬಿಟ್ಟು, ಹೊಸ ಮೂಖಗಳಿಗೆ ಅವಕಾಶ ನೀಡಲು ಹೈಕಮಾಂಡ್ ಬಯಸಿದೆ.
ಇನ್ನು ಸಿಂಗ್ ಅವರ ಸೂಚನೆಗೆ ಉತ್ತರಿಸಿರುವ ಸಿಎಂ, ಸಂಪುಟ ಪುನಾರಚನೆಗೆ ಕಾಲವಕಾಶ ಕೇಳಿದ್ದು, ಚಳಿಗಾಲದ ಅಧಿವೇಶನ ಬಳಿಕ ಸಂಪುಟ ಪುನಾರಚನೆ ಮಾಡುವುದಾಗಿ ಭರವಸೆ ನೀಡಿದ್ದಾರೆ ಮತ್ತು ಈ ವೇಳೆ ಕನಿಷ್ಠ 6 ರಿಂದ 7 ಸಚಿವರನ್ನು ಸಂಪುಟದಿಂದ ಕೈ ಬಿಡುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ. ಆದರೆ ಇದಕ್ಕೆ ಒಪ್ಪದ ದಿಗ್ವಿಜಯ್ ಸಿಂಗ್ ಅವರು, ಒಂದೇರಡು ದಿನಗಳಲ್ಲಿ ಸಂಪುಟ ಪುನಾರಚನೆ ಪಟ್ಟಿಯೊಂದಿಗೆ ನನ್ನನ್ನು ಭೇಟಿ ಮಾಡಿ, ಇಲ್ಲದಿದ್ದರೆ ಸಂಪುಟ ಪುನಾರಚನೆ ಅಥವಾ ವಿಸ್ತರಣೆಗೆ ಸಿಎಂ ಒಪ್ಪುತ್ತಿಲ್ಲ ಎಂದು ರಾಹುಲ್ ಗಾಂಧಿ ಅವರಿಗೆ ತಿಳಿಸುವುದಾಗಿ ಎಚ್ಚರಿಸಿದ್ದಾರೆ ಎನ್ನಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


