ಪ್ರಧಾನ ಸುದ್ದಿ

ಸೆ.27ಕ್ಕೆ ಜಯಲಲಿತಾ ರಾಜಕೀಯ ಭವಿಷ್ಯ ನಿರ್ಧಾರ

ಅಕ್ರಮವಾಗಿ ಆಸ್ತಿ ಗಳಿಸಿದ ಆರೋಪ ಎದುರಿಸುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ರಾಜಕೀಯ..

ಸೆ.27ಕ್ಕೆ ಜಯಲಲಿತಾ ರಾಜಕೀಯ ಭವಿಷ್ಯ ನಿರ್ಧಾರ
Published On :

ಚೆನ್ನೈ: ಅಕ್ರಮವಾಗಿ ಆಸ್ತಿ ಗಳಿಸಿದ ಆರೋಪ ಎದುರಿಸುತ್ತಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ರಾಜಕೀಯ ಭವಿಷ್ಯ ಇದೇ ಸೆಪ್ಟೆಂಬರ್ 27ಕ್ಕೆ ನಿರ್ಧಾರವಾಗಲಿದೆ. ಆದರೆ ಮುಜುಗರ ತಪ್ಪಿಸಿಕೊಳ್ಳಲು ಅದಕ್ಕೂ ಮುನ್ನವೇ ಜಯಾ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಲಿದ್ದಾರೆ ಎನ್ನಲಾಗುತ್ತಿದೆ.

ಜಯಾ ಹಾಗೂ ಅವರ ಮಾಜಿ ಆಪ್ತೆ ಶಶಿಕಲಾ ಅವರ ವಿರುದ್ಧದ ಅಕ್ರಮ ಆಸ್ತಿ ಪ್ರರಕಣದ ತೀರ್ಪು ಸೆ.27ರಂದು ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಹೊರಬೀಳಲಿದೆ. ಒಂದು ವೇಳೆ ಜಯಾ ತಪ್ಪಿತಸ್ಥೆ ಎಂದು ಕೋರ್ಟ್ ತೀರ್ಪು ನೀಡಿದರೆ ಅವರು ಅನಿವಾರ್ಯವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜನಾಮೆ ನೀಡಬೇಕಾಗುತ್ತದೆ. ಆದರೆ ಮುಜುಗರ ತಪ್ಪಿಸಿಕೊಳ್ಳಲು ತೀರ್ಪು ಬರುವ ಮುನ್ನವೇ ರಾಜಿನಾಮೆ ನೀಡಲು ಜಯಾ ಮುಂದಾಗಿದ್ದು, ಈ ಸಂಬಂಧ ಚರ್ಚಿಸಿ, ಅಂತಿಮ ನಿರ್ಧಾರ ತೆಗೆದುಕೊಳ್ಳಲು ಇಂದು ಸಂಜೆ ಸಚಿವ ಸಂಪುಟ ಸಭೆ ಕರೆಯಲಾಗಿದೆ. ಸಭೆಯ ಬಳಿಕ ಜಯಾ ತಮ್ಮ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ.

ಜಯಾ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆ ಪೂರ್ಣಗೊಳಿಸಿರುವ ಬೆಂಗಳೂರಿನ ವಿಶೇಷ ನ್ಯಾಯಾಲಯ ಸೆ.27ಕ್ಕೆ ತೀರ್ಪು ಕಾಯ್ದಿರಿಸಿದ್ದು, ಅಂದು ಪ್ರಕರಣದ ಪ್ರಮುಖ ಆರೋಪಿ ಜಯಲಲಿತಾ ಸೇರಿದಂತೆ, ಸುಧಾಕರನ್, ಶಶಿಕಲಾ ಹಾಗೂ ಇಲವರಸಿಗೆ ಖುದ್ದು ಹಾಜರಾಗಬೇಕು ಎಂದು ಸೂಚಿಸಲಾಗಿದೆ.

ಜಯಾಲಲಿತಾ ಅವರು 66.65 ಕೋಟಿ ರುಪಾಯಿ ಅಕ್ರಮ ಆಸ್ತಿ ಗಳಿಸಿದ ಆರೋಪ ಎದುರಿಸುತ್ತಿದ್ದು, ಒಂದು ವೇಳೆ ಆರೋಪ ಸಾಬೀತಾಗಿ ಜಯಲಲಿತಾ ಅವರಿಗೆ ಎರಡು ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆಯಾದರೆ ಅವರು ವಿಧಾನಸಭಾ ಸದಸ್ಯತ್ವ ಕಳೆದುಕೊಳ್ಳುತ್ತಾರೆ. ಅಲ್ಲದೆ ಅವರು ಮುಂದಿನ ಆರು ವರ್ಷಗಳ ಕಾಲ ಯಾವುದೇ ಚುನಾವಣೆಗೆ ಸ್ಪರ್ಧಿಸುವಂತಿಲ್ಲ. ಹೀಗಾಗಿ ಈ ಅವಮಾನ ಹೊತ್ತುಕೊಂಡು ಇಲ್ಲಿಂದ ಚೆನ್ನೈಗೆ ಹೋಗುವ ಬದಲು ತೀರ್ಪು ಪ್ರಕಟಣೆಗೂ ಮುನ್ನವೇ ರಾಜೀನಾಮೆ ನೀಡುವ ಯೋಚನೆ ಜಯಲಲಿತಾ ಅವರ ಮನದಲ್ಲಿ ಸುಳಿದಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.