ಪ್ರಧಾನ ಸುದ್ದಿ

ಹೈಕೋರ್ಟ್‌ ಮೊರೆ ಹೋದ ಅಮ್ಮ, ಜಯಾ ಪರ ಜೇಠ್ಮಲಾನಿ ವಾದ

ಅಕ್ರಮ ಆಸ್ತಿ ಗಳಿಕೆಯ ಆರೋಪದಲ್ಲಿ ಜೈಲು ಪಾಲಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ...

ಹೈಕೋರ್ಟ್‌ ಮೊರೆ ಹೋದ ಅಮ್ಮ, ಜಯಾ ಪರ ಜೇಠ್ಮಲಾನಿ ವಾದ
Published On :

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆಯ ಆರೋಪದಲ್ಲಿ ಜೈಲು ಪಾಲಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ , ಎಐಎಡಿಎಂಕೆ ನಾಯಕಿ ಜೆ.ಜಯಲಲಿತಾ ಪರ ವಕೀಲರು ಸೋಮವಾರ ಹೈಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದಾರೆ.

ಬೆಂಗಳೂರಿನ ಸಿಬಿಐ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿರುವ ಜಯಾ ಪರ ವಕೀಲರು ಸಿಬಿಐ ತೀರ್ಪನ್ನು ರದ್ದುಗೊಳಿಸಬೇಕು ಹಾಗೂ ಜಾಮೀನು ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಈ ಮಧ್ಯೆ ನಾಲ್ಕು ವರ್ಷ ಜೈಲು ಶಿಕ್ಷೆಗೆ ಒಳಗಾಗಿರುವ ಜಯಲಲಿತಾ ಪರ ವಕಾಲತ್ತು ವಹಿಸಲು ಖ್ಯಾತ ನ್ಯಾಯಾವಾದಿ ರಾಮ್ ಜೇಠ್ಮಲಾನಿ ಇಂದು ನಗರಕ್ಕೆ ಆಗಮಿಸಿದ್ದಾರೆ.

ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಪ್ರಕರಣದ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ನಾಳೆ ಕೈಗೆತ್ತಿಕೊಳ್ಳಲಿದೆ.





Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.