ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಆರಂಭ, ಭೂ ಸ್ವಾಧೀನ ಮಸೂದೆ ಪ್ರಮುಖ ಅಜೆಂಡ
ನಗರದಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಗೆ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ ಅವರು ಶುಕ್ರವಾರ ಚಾಲನೆ ನೀಡಿದ್ದಾರೆ.

ಬೆಂಗಳೂರು: ನಗರದಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಗೆ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ ಅವರು ಶುಕ್ರವಾರ ಚಾಲನೆ ನೀಡಿದ್ದಾರೆ.
ಅಶೋಕ ಹೋಟೆಲ್‌ನಲ್ಲಿ ಇಂದು ಬೆಳಗ್ಗೆ 10 ಗಂಟೆಯ ಸುಮಾರಿಗೆ ಆಡ್ವಾಣಿ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕಾರಣಿಯನ್ನು ಉದ್ಘಾಟಿಸಿದರು. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ವಿವಿಧ ರಾಜ್ಯಗಳಿಂದ ಆಗಮಿಸಿರುವ ಸುಮಾರು 330ಕ್ಕೂ ಹೆಚ್ಚು ನಾಯಕರು ಇಂದಿನ ಕಾರ್ಯಕಾರಣಿಯಲ್ಲಿ ಭಾಗವಹಿಸಿದ್ದಾರೆ.
ಭೂ ಸ್ವಾಧೀನ ಮಸೂದೆ, ಪಕ್ಷವನ್ನು ವಿಶೇಷವಾಗಿ ದಕ್ಷಿಣ ಭಾರತದಲ್ಲಿ ಬಲವರ್ಧನೆ ಮಾಡುವುದು ಮತ್ತು ಸ್ವಚ್ಛ ಭಾರತ ಮತ್ತು ಸ್ವಚ್ಛ ಗಂಗಾ ಅಭಿಯಾನದಲ್ಲಿ ಹೆಚ್ಚು ಕಾರ್ಯಕರ್ತರು ಪಾಲ್ಗೊಳ್ಳುವುದು ಸೇರಿದಂತೆ ಹಲವು ವಿಷಯಗಳ ಕುರಿತು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ಚರ್ಚೆಯಾಗಲಿವೆ.
ಕಾರ್ಯಕಾರಣಿ ಸಭೆ ಬಳಿಕ ಇಂದು ಸಂಜೆ ಬಸವನ ಗುಡಿಯ ನ್ಯಾಷಿನಲ್ ಕಾಲೇಜ್ ಮೈದಾನದಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರು ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


