ಮೋದಿ ಸರ್ಕಾರ ಮುಂದಿನ 20 ವರ್ಷಗಳ ಕಾಲ ಅಧಿಕಾರದಲ್ಲಿರುತ್ತದೆ: ಜಾವಡೇಕರ್
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮುಂದಿನ 20 ವರ್ಷಗಳ ಕಾಲ ಅಧಿಕಾರದಲ್ಲಿರುತ್ತದೆ ಎಂದು ಕೇಂದ್ರ ಪರಿಸರ ಖಾತೆ...

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಮುಂದಿನ 20 ವರ್ಷಗಳ ಕಾಲ ಅಧಿಕಾರದಲ್ಲಿರುತ್ತದೆ ಎಂದು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರು ಶುಕ್ರವಾರ ಹೇಳಿದ್ದಾರೆ.
ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭಾಷಣದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಜಾವಡೇಕರ್, 10ರಿಂದ 20 ವರ್ಷಗಳ ಕಾಲ ಮೋದಿ ಸರ್ಕಾರ ಅಧಿಕಾರದಲ್ಲಿರುತ್ತದೆ. ಹೀಗಾಗಿ ನಾವು ಎಲ್ಲಿಗೂ ಹೋಗಲ್ಲ ಎಂದರು.
ಭಾರತೀಯ ಜನತಾ ಪಕ್ಷ ವಿಶ್ವದಲ್ಲಿಯೇ ದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಆ ನೆಲೆಯಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ, ಎಲ್.ಕೆ.ಅಡ್ವಾಣಿ ಹಾಗೂ ಅರುಣ್ ಜೇಟ್ಲಿಯವರನ್ನು ಅಭಿನಂದಿಸಬೇಕು ಎಂದರು.
ಕೇಂದ್ರ ಸರ್ಕಾರದ ಸಾಧನೆಗಳನ್ನು ಮನೆ ಮನೆಗೂ ತಲುಪಿಸುತ್ತೇವೆ. ಸದಸ್ಯರ ಭೇಟಿಗಾಗಿ ಮಹಾ ಸಂಪರ್ಕ ಅಭಿಯಾನ ನಡೆಸಲಾಗುವುದು ಎಂದು ಜಾವಡೇಕರ್ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


