ರಾಜ್ಯ ಸರ್ಕಾರದಿಂದ ಷರತ್ತು: ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣದ ತನಿಖೆಗೆ ನಿರಾಕರಿಸಿದ ಸಿಬಿಐ
ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೆಲವು ಷರತ್ತುಗಳನ್ನು ವಿಧಿಸಿದ ಹಿನ್ನೆಲೆಯಲ್ಲಿ ಸಿಬಿಐ....

ಬೆಂಗಳೂರು: ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕೆಲವು ಷರತ್ತುಗಳನ್ನು ವಿಧಿಸಿದ ಹಿನ್ನೆಲೆಯಲ್ಲಿ ಸಿಬಿಐ ಪ್ರಕರಣದ ತನಿಖೆ ನಡೆಸಲು ನಿರಾಕರಿಸಿದೆ.
ಸಾಕಷ್ಟು ಪ್ರತಿಭಟನೆ ಹಾಗೂ ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದು ಪ್ರಕರಣವನ್ನು ಸಿಬಿಐಗೆ ವಹಿಸಿದ್ದ ರಾಜ್ಯ ಸರ್ಕಾರ, ಮೂರು ತಿಂಗಳಲ್ಲೇ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸ ಎಂಬ ಷರತ್ತಿನೊಂದಿಗೆ ಮಾರ್ಚ್ 24ರಂದು ಅಧಿಸೂಚನೆ ಹೊರಡಿಸಿತ್ತು. ಆದರೆ ಕರ್ನಾಟಕ ಸರ್ಕಾರದ ಷರತ್ತನ್ನು ಒಪ್ಪಿಕೊಳ್ಳಲು ನಿರಾಕರಿಸಿರುವ ಸಿಬಿಐ ಅಧಿಸೂಚನೆಯನ್ನು ವಾಪಸ್ ಕಳುಹಿಸಿದೆ.
ರಾಜ್ಯ ಸರ್ಕಾರದ ಷರತ್ತುಬದ್ಧ ಅಧಿಸೂಚನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಸಿಬಿಐ, ಷರತ್ತು ರಹಿತ ಅಧಿಸೂಚನೆ ಹೊರಡಿಸಿದರೆ ಮಾತ್ರ ಡಿ.ಕೆ.ರವಿ ಸಾವಿನ ಪ್ರಕರಣದ ತನಿಖೆ ನಡೆಸುವುದಾಗಿ ಸ್ಪಷ್ಟಪಡಿಸಿದೆ.
ಇನ್ನು ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು, ಯಾವ ಉದ್ದೇಶದಿಂದ ಸರ್ಕಾರ ಷರತ್ತು ವಿಧಿಸಿದೆ ಎಂದು ಪ್ರಶ್ನಿಸಿದ್ದಾರೆ.
ಬಹುಷ ರಾಜ್ಯ ಸರ್ಕಾರಕ್ಕೆ ಈ ಪ್ರಕರಣದಲ್ಲಿ ಸತ್ಯ ಹೊರಬರುವುದು ಬೇಕಾಗಿಲ್ಲ ಅಂತ ಕಾಣಿಸುತ್ತದೆ. ಅವರ ತಪ್ಪುಗಳನ್ನು ಮುಚ್ಚಿಕೊಳ್ಳಲು ಮೂರು ತಿಂಗಳಿನಲ್ಲಿ ತನಿಖಾ ವರದಿ ನೀಡುವಂತೆ ರಾಜ್ಯ ಸರ್ಕಾರ ಸಿಬಿಐಗೆ ಷರತ್ತು ವಿಧಿಸಿದೆ ಎಂದು ಕುಮಾರಸ್ವಾಮಿ ಆರೋಪಿಸಿದರು.
ರವಿ ಸಾವಿನ ಪ್ರಕರಣ ಅತೀ ಸೂಕ್ಷ್ಮವಾಗಿದ್ದು, ಈ ಪ್ರಕರಣವನ್ನು ಸಿಬಿಐ ಹಲವು ಆಯಾಮಗಳಲ್ಲಿ ತನಿಖೆ ನಡೆಸಬೇಕಾಗುತ್ತದೆ. ಹೀಗಾಗಿ ರಾಜ್ಯ ಸರ್ಕಾರ ಸಿಬಿಐಗೆ ಷರತ್ತು ವಿಧಿಸಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


