ಡಿ.ಕೆ.ರವಿ ಪ್ರಕರಣ: ಷರತ್ತುಬದ್ಧ ಅಧಿಸೂಚನೆಗೆ ಸಿಬಿಐ ಆಕ್ಷೇಪ, ಹೊಸ ಅಧಿಸೂಚನೆ ಹೊರಡಿಸಿದ ಸರ್ಕಾರ
ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮುನ್ನ ರಾಜ್ಯ ಸರ್ಕಾರ ಹೊರಡಿಸಿದ್ದ ಷರತ್ತುಬದ್ಧ ಅಧಿಸೂಚನೆಗೆ....

ಬೆಂಗಳೂರು: ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮುನ್ನ ರಾಜ್ಯ ಸರ್ಕಾರ ಹೊರಡಿಸಿದ್ದ ಷರತ್ತುಬದ್ಧ ಅಧಿಸೂಚನೆಗೆ ಸಿಬಿಐ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಸೋಮವಾರ ಕರ್ನಾಟಕ ಸರ್ಕಾರ ಹೊಸ ಅಧಿಸೂಚನೆ ಹೊರಡಿಸಿದೆ.
ಮೂರು ತಿಂಗಳಲ್ಲೇ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಬೇಕು ಎಂಬ ಷರತ್ತನ್ನು ಒಪ್ಪಿಕೊಳ್ಳಲು ನಿರಾಕರಿಸಿದ ಸಿಬಿಐ ಅಧಿಸೂಚನೆಯನ್ನು ವಾಪಸ್ ಕಳುಹಿಸಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಯಾವುದೇ ಷರತ್ತು ವಿಧಿಸದೆ ಹೊಸ ಅಧಿಸೂಚನೆ ಜಾರಿ ಮಾಡಿದೆ.
ಸಾಕಷ್ಟು ಪ್ರತಿಭಟನೆ ಹಾಗೂ ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದು ಪ್ರಕರಣವನ್ನು ಸಿಬಿಐಗೆ ವಹಿಸಿದ್ದ ರಾಜ್ಯ ಸರ್ಕಾರ, ಮೂರು ತಿಂಗಳಲ್ಲೇ ಪ್ರಕರಣದ ತನಿಖೆಯನ್ನು ಪೂರ್ಣಗೊಳಿಸಬೇಕು ಎಂಬ ಷರತ್ತಿನೊಂದಿಗೆ ಮಾರ್ಚ್ 24ರಂದು ಅಧಿಸೂಚನೆ ಹೊರಡಿಸಿತ್ತು. ಆದರೆ ಕರ್ನಾಟಕ ಸರ್ಕಾರದ ಷರತ್ತನ್ನು ಒಪ್ಪಿಕೊಳ್ಳಲು ನಿರಾಕರಿಸಿರುವ ಸಿಬಿಐ ಅಧಿಸೂಚನೆಯನ್ನು ವಾಪಸ್ ಕಳುಹಿಸಿತ್ತು.
ರಾಜ್ಯ ಸರ್ಕಾರದ ಷರತ್ತುಬದ್ಧ ಅಧಿಸೂಚನೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಸಿಬಿಐ, ಷರತ್ತು ರಹಿತ ಅಧಿಸೂಚನೆ ಹೊರಡಿಸಿದರೆ ಮಾತ್ರ ಡಿ.ಕೆ.ರವಿ ಸಾವಿನ ಪ್ರಕರಣದ ತನಿಖೆ ನಡೆಸುವುದಾಗಿ ಸ್ಪಷ್ಟಪಡಿಸಿತ್ತು.
ಸಿಬಿಐಗೆ ಮತ್ತೆ ಮನವಿ ಮಾಡಲಾಗುವುದು: ಸಿಎಂ
ಸಿಬಿಐ ಅಧಿಸೂಚನೆಯನ್ನು ವಾಪಸ್ ಕಳುಹಿಸಿರುವ ಬಗ್ಗೆ ದೆಹಲಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಕರಣದ ತನಿಖೆ ನಡೆಸುವಂತೆ ಕೇಂದ್ರ ತನಿಖಾ ಸಂಸ್ಥೆಗೆ ಮತ್ತೆ ಮನವಿ ಮಾಡಲಾಗುವುದು ಎಂದರು.
'ಷರತ್ತು ವಿಧಿಸಬಾರದು ಎಂದು ಅವರು ಅಧಿಸೂಚೆಯನ್ನು ವಾಪಸ್ ಕಳುಹಿಸಿದ್ದಾರೆ. ಹೀಗಾಗಿ ನಾವು ಷರತ್ತು ವಿಧಿಸಿದೆ ಮತ್ತೊಮ್ಮೆ ಅಧಿಸೂಚೆನೆಯನ್ನು ಕಳುಹಿಸುತ್ತೇವೆ' ಎಂದು ವರದಿಗಾರರಿಗೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


