ಪ್ರಧಾನ ಸುದ್ದಿ

ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಮುಫ್ತಿ ಮಹಮ್ಮದ್ ಸಯ್ಯದ್

ರಾಜ್ಯದ ಪರಿಸ್ಥಿತಿಯನ್ನು ವಿವರಿಸಲು ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮಹಮ್ಮದ್ ಸಯ್ಯದ್ ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ

ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಮುಫ್ತಿ ಮಹಮ್ಮದ್ ಸಯ್ಯದ್
ಮುಫ್ತಿ ಮಹಮ್ಮದ್ ಸಯ್ಯದ್-ನರೇಂದ್ರ ಮೋದಿ ಭೇಟಿ
Published On :

ನವದೆಹಲಿ: ರಾಜ್ಯದ ಪರಿಸ್ಥಿತಿಯನ್ನು ವಿವರಿಸಲು ಜಮ್ಮು ಕಾಶ್ಮೀರ ಮುಖ್ಯಮಂತ್ರಿ ಮುಫ್ತಿ ಮಹಮ್ಮದ್ ಸಯ್ಯದ್ ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.

ಮಾರ್ಚ್ ೧ ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮೇಲೆ ಇದು ಪ್ರಧಾನಿಯವರೊಂದಿಗೆ ಮೊದಲ ಅಧಿಕೃತ ಭೇಟಿ. ಕೇಂದ್ರ ಸಂಪುಟ ವಿಸ್ತರಣೆಯಾಗಲಿದ್ದು ಅದರಲ್ಲಿ ಪಿಡಿಪಿ ಸದಸ್ಯರಿಗೆ ಸ್ಥಾನ ಸಿಗಲಿದೆ ಎಂಬ ವರದಿಗಳ ಹಿನ್ನಲೆಯಲ್ಲಿ ಈ ಭೇಟಿ ನಡೆದಿದೆ.

ಈ ಭೇಟಿಯ ನಂತರ ಮುಫ್ತಿ ಸಯ್ಯದ್, ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದಾರೆ.

ಈ ಭೇಟಿಯ ವೇಳೆಯಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಹಾಗು ಪೋಲಿಸ್ ಪಡೆಗಳ ಮೇಲೆ ನಡೆದ ಭಯೋತ್ಪಾದನಾ ದಾಳಿಯ ಬಗ್ಗೆ ರಾಜನಾಥ್ ಸಿಂಗ್ ಅವರಿಗೆ ಮುಫ್ತಿ ಸಯ್ಯದ್ ವಿವರಿಸಿದರು ಎಂದು ತಿಳಿದುಬಂದಿದೆ.

ಸೋಫಿಯನ್ ಜಿಲ್ಲೆಯಲ್ಲಿ ಶಂಕಿತ ಭಯೋತ್ಪಾದಕರು ನೆನ್ನೆ ಮೂರು ಜನ ಪೋಲಿಸರನ್ನು ಕೊಂದುಹಾಕಿದ್ದರು.

ನೆನ್ನೆ ರಾತ್ರಿ ನವದೆಹಲಿಗೆ ಬಂದಿರುವ ಸಯ್ಯದ್, ಜಮ್ಮು ಕಾಶ್ಮೀರದ ಅಭಿವೃದ್ಧಿಯ ಬಗೆಗೆ ಎಲ್ಲ ಪ್ರಮುಖ ಸಂಪುಟ ಸಚಿವರ ಜೊತೆ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.