ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ: ಬಿಜೆಪಿ ಶಾಸಕ ಆನಂದ್ ಸಿಂಗ್‌ಗೆ ಏ.17ರವರೆಗೆ ನ್ಯಾಯಾಂಗ ಬಂಧನ
ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ವಿಜಯನಗರ ಬಿಜೆಪಿ ಶಾಸಕ ಆನಂದ್ ಸಿಂಗ್ ಅವರನ್ನು ಲೋಕಾಯುಕ್ತ ವಿಶೇಷ ತನಿಖಾ ತಂಡ ಗುರುವಾರ ಬಂಧಿಸಿದೆ.

ಬೆಂಗಳೂರು: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ವಿಜಯನಗರ ಬಿಜೆಪಿ ಶಾಸಕ ಆನಂದ್ ಸಿಂಗ್ ಅವರನ್ನು ಲೋಕಾಯುಕ್ತ ವಿಶೇಷ ತನಿಖಾ ತಂಡ ಗುರುವಾರ ಬಂಧಿಸಿದೆ.
ಇಂದು ಬೆಳಗ್ಗೆ ಲೋಕಾಯುಕ್ತ ಪೊಲೀಸರು ಆನಂದ್ ಸಿಂಗ್ ಅವರನ್ನು ಬಂಧಿಸಿ, ಮಧ್ಯಾಹ್ನ ಬೆಂಗಳೂರಿನ ಲೋಕಾಯುಕ್ತ ಕೋರ್ಟ್‌ಗೆ ಹಾಜರು ಪಡಿಸಿದರು. ವಿಚಾರಣೆ ನಡೆಸಿದ ಕೋರ್ಟ್, ಆನಂದ್ ಸಿಂಗ್ ಅವರನ್ನು ಏಪ್ರಿಲ್ 17ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ಈ ಹಿಂದೆ ಇದೇ ಪ್ರಕರಣ ಸಂಬಂಧ ಸಿಬಿಐನಿಂದ ಬಂಧನಕ್ಕೆ ಒಳಗಾಗಿದ್ದ ಆನಂದ್ ಸಿಂಗ್, ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.
ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಆನಂದ್ ಸಿಂಗ್ ವಿರುದ್ಧ ಒಟ್ಟು ಮೂರು ಪ್ರಕರಣಗಳು ದಾಖಲಾಗಿದ್ದು, ಕಳೆದ 2013 ಅಕ್ಟೋಬರ್ 17ರಂದು ಶಾಸಕ ಆನಂದ್ ಸಿಂಗ್ ಅವರನ್ನು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


