ಪ್ರಧಾನ ಸುದ್ದಿ

ಕೂಡ್ಲಗಿ ಶಾಸಕ ನಾಗೇಂದ್ರಗೆ ಷರತ್ತುಬದ್ಧ ಜಾಮೀನು

ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ಕೂಡ್ಲಿಗಿ ಶಾಸಕ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಲೋಕಾಯುಕ್ತ ಕೋರ್ಟ್...

ಕೂಡ್ಲಗಿ ಶಾಸಕ ನಾಗೇಂದ್ರಗೆ ಷರತ್ತುಬದ್ಧ ಜಾಮೀನು
ಕೂಡ್ಲಗಿ ಶಾಸಕ ನಾಗೇಂದ್ರ
Published On :

ಬೆಂಗಳೂರು: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ಕೂಡ್ಲಿಗಿ ಶಾಸಕ ಬಿ. ನಾಗೇಂದ್ರ ಅವರಿಗೆ ಬೆಂಗಳೂರಿನ ಲೋಕಾಯುಕ್ತ ಕೋರ್ಟ್ ಗುರುವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಶಾಸಕ ನಾಗೇಂದ್ರ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಲೋಕಾಯುಕ್ತ ಕೋರ್ಟ್, ದೇಶಬಿಟ್ಟು ಹೋಗಬಾರದು ಎಂಬ ಷರತ್ತಿನ ಮೇಲೆ ಜಾಮೀನು ಮಂಜೂರು ಮಾಡಿದೆ. ಅಲ್ಲದೆ ಪಾಸ್‌ಪೋರ್ಟ್ ನ್ಯಾಯಾಲಯಕ್ಕೆ ಒಪ್ಪಿಸುವಂತೆ ಮತ್ತು ತಿಂಗಳಿಗೆ ಎರಡು ಬಾರಿ ತನಿಖಾಧಿಕಾರಿ ಮುಂದೆ ಹಾಜರಾಗಬೇಕು ಎಂದು ಕೋರ್ಟ್ ಸೂಚಿಸಿದೆ.

ಕಳೆದ ಮಾರ್ಚ್ 20ರಂದು ಲೋಕಾಯುಕ್ತ ವಿಶೇಷ ತನಿಖಾ ತಂಡ ನಾಗೇಂದ್ರ ಅವರನ್ನು ಬೆಂಗಳೂರಿನಲ್ಲಿ ಬಂಧಿಸಿತ್ತು.

ಇದೇ ಪ್ರಕರಣ ಸಂಬಂಧ ಕಳೆದ ವರ್ಷ ಸಿಬಿಐ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿದ್ದ ನಾಗೇಂದ್ರ ಅವರು ಸುಮಾರು ಒಂದು ವರ್ಷ ಜೈಲು ವಾಸದ ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದೀಗ ಎರಡನೇ ಬಾರಿ ಜಾಮೀನಿನ ಮೇಲೆ ಬಿಡುಗಡೆಯಾಗುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.