ಮೋಸದ ಪ್ರಕರಣ ತೀರ್ಪು ವಿರುದ್ಧ ಸತ್ಯಂ ಸಂಸ್ಥಾಪಕ ರಾಮಲಿಂಗರಾಜು ಮರುಮನವಿ
ಮೋಸದ ಹಗರಣದಲ್ಲಿ ತಪ್ಪಿತಸ್ಥ ಎಂದು ಸಾಬೀತಾಗಿ ೭ ವರ್ಷಗಳ ಜೈಲುಶಿಕ್ಷೆಗೆ ಗುರಿಯಾಗಿದ್ದ ಸತ್ಯಂ ಕಂಪ್ಯೂಟರ್ ಸೇವೆಗಳ ಸಂಸ್ಥೆಯ ಸಂಸ್ಥಾಪಕ

ಮೋಸದ ಹಗರಣದಲ್ಲಿ ತಪ್ಪಿತಸ್ಥ ಎಂದು ಸಾಬೀತಾಗಿ ೭ ವರ್ಷಗಳ ಜೈಲುಶಿಕ್ಷೆಗೆ ಗುರಿಯಾಗಿದ್ದ ಸತ್ಯಂ ಕಂಪ್ಯೂಟರ್ ಸೇವೆಗಳ ಸಂಸ್ಥೆಯ ಸಂಸ್ಥಾಪಕ ರಾಮಲಿಂಗ ರಾಜು ನ್ಯಾಯಾಲಯದ ತೀರ್ಪಿನ ವಿರುದ್ಧ ಅರ್ಜಿ ಸಲ್ಲಿಸಿದ್ದಾರೆ.
"ಈ ತೀರ್ಪಿನ ವಿರುದ್ಧ ಸೆಷನ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದೇವೆ" ಎಂದು ತಿಳಿಸಿದ ರಾಜು ಅವರ ವಕೀಲ ಉಮಾ ಮಹೇಶ್ವರ್ ರಾವ್ ಅವರು ಹೆಚ್ಚಿನ ವಿವರಗಳನ್ನು ನೀಡಿಲ್ಲ.
ಓಹಿಯೋ ವಿಶ್ವವಿದ್ಯಾಲಯದ ಪದವೀಧರ, ೧೯೮೭ ರಲ್ಲಿ ಸತ್ಯಂ ಸಂಸ್ಥೆಯನ್ನು ಸ್ಥಾಪಿಸಿದ ರಾಮಲಿಂಗಂ ರಾಜು ಅವರನ್ನು ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದಕ್ಕೆ, ಹಾಗೂ ಸಂಸ್ಥೆಯ ಬ್ಯಾಂಕ್ ಅಕೌಂಟಿನಲ್ಲಿ ಹಗರಣ ಮಾಡಿದ್ದಕ್ಕೆ ತಪ್ಪಿತಸ್ಥ ಎಂದು ಪರಿಗಣಿಸಿ ಗುರುವಾರ ಹೈದರಾಬಾದಿನ ಕೋರ್ಟ್ ರಾಜು ಅವರಿಗೆ ಶಿಕ್ಷೆ ನೀಡಿತ್ತು.
ಜನವರಿ ೨೦೦೯ ರಲ್ಲಿ ರಾಜು ಅವರು ಸಂಸ್ಥೆಯಲ್ಲಿ ನಡೆಸಿದ ಮೋಸದ ಬಗ್ಗೆ ತಪ್ಪೊಪ್ಪಿಗೆ ಪತ್ರ ನೀಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


