ರಸ್ತೆ ಕಿತ್ತಾಟ: ಜಮ್ಮುವಿನಲ್ಲಿ ಯುವಕ ಥಳಿತದಿಂದ ಸಾವು
ಜಮ್ಮುವಿನ ಹಳೆ ಜಾನಿಪೋರ ಪ್ರದೇಶದಲ್ಲಿ ಎರಡು ದ್ವಿಚಕ್ರ ವಾಹನಗಳು ಢಿಕ್ಕಿ ಹೊಡೆದು, ಅದರಲ್ಲಿ ಒಬ್ಬ ೨೭ ವರ್ಷದ ದ್ವಿಚಕ್ರ ಸವಾರನಿಗೆ ಮನಬಂದಂತೆ

ಜಮ್ಮು: ಜಮ್ಮುವಿನ ಹಳೆ ಜಾನಿಪೋರ ಪ್ರದೇಶದಲ್ಲಿ ಎರಡು ದ್ವಿಚಕ್ರ ವಾಹನಗಳು ಢಿಕ್ಕಿ ಹೊಡೆದು, ಅದರಲ್ಲಿ ಒಬ್ಬ ೨೭ ವರ್ಷದ ದ್ವಿಚಕ್ರ ಸವಾರನಿಗೆ ಮನಬಂದಂತೆ ಥಳಿಸಿದ್ದರಿಂದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ಸಂಜೆ ರಾಕೇಶ್ ಕುಮಾರ್ ಎಂಬ ಯುವಕನಿಗೆ ಕನಿಷ್ಠ ಮೂರು ಜನ ಸಾಯುವವರೆಗೂ ಹೊಡೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹಳೆಯ ಜಾನಿಪೋರಾ ಪ್ರದೇಶದ ನಿವಾಸಿ ಸಂತ್ರಸ್ತ ರಾಕೇಶ್ ತನ್ನ ತಮ್ಮನ ಜೊತೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ, ಮೂರು ಜನರು ಕುಳಿತಿದ್ದ ಮತ್ತೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಾಗ ಈ ಗಲಾಟೆ ಪ್ರಾರಂಭವಾಗಿದೆ.
ದೇಹವನ್ನು ಶವಪರೀಕ್ಷೆಗೆ ಕಳುಹಿಸಲಾಗಿದೆ.
ಆರೋಪಿಗಳನ್ನು ಗುರುತಿಸಲಾಗಿದೆ ಎಂದು ತಿಳಿಸಿರುವ ಪೊಲೀಸರು ಇನ್ನೂ ಯಾರನ್ನೂ ಬಂಧಿಸಿಲ್ಲ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


