ಸಂಪುಟ ದರ್ಜೆ ಸ್ಥಾನಮಾನ ನಿರಾಕರಿಸಿದ ಬಾಬಾ ರಾಮ್‌ದೇವ್
ಹರಿಯಾಣದ ಬಿಜೆಪಿ ಸರ್ಕಾರ ನೀಡಿದ್ದ ಸಂಪುಟ ದರ್ಜೆ ಸ್ಥಾನಮಾನದ ಆಹ್ವಾನವನ್ನು ಯೋಗ ಗುರು ಬಾಬಾ ರಾಮ್‌ದೇವ್ ಅವರು ಮಂಗಳವಾರ....

ಚಂಡೀಗಢ: ಹರಿಯಾಣದ ಬಿಜೆಪಿ ಸರ್ಕಾರ ನೀಡಿದ್ದ ಸಂಪುಟ ದರ್ಜೆ ಸ್ಥಾನಮಾನದ ಆಹ್ವಾನವನ್ನು ಯೋಗ ಗುರು ಬಾಬಾ ರಾಮ್‌ದೇವ್ ಅವರು ಮಂಗಳವಾರ ತಿರಸ್ಕರಿಸಿದ್ದಾರೆ.
ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರೊಂದಿಗೆ ಸುದ್ದಿಗಾರರೊಂದಿಗೆ ಮಾತನಾಡಿದ ಯೋಗ ಗುರು, 'ನಾನು ಒಬ್ಬ ಸನ್ಯಾಸಿ, ಮಾನವಿಯತೆಯಿಂದ ಸೇವೆ ಮಾಡುವುದು ನನ್ನ ಉದ್ದೇಶ. ನಾನು ಯಾವುದೇ ಸಚಿವ ಸ್ಥಾನ ಅಥವಾ ಸ್ಥಾನಮಾನ ಬಯಸುತ್ತಿಲ್ಲ' ಎಂದು ಹೇಳಿದ್ದಾರೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಹರಿಯಾಣ ಸಿಎಂ ಖಟ್ಟರ್, ರಾಮ್‌ದೇವ್ ಅವರು ಸಂಪುಟ ದರ್ಜೆ ಸ್ಥಾನಮಾನ ಬೇಡ ಎಂದು ಹೇಳಿದ್ದಾರೆ. ಆದರೆ ಈಗಲೂ ನಾನು ಅವರಿಗೆ ಸರ್ಕಾರದ ಶಿಷ್ಟಾಚಾರವನ್ನು ಒಪ್ಪಿಕೊಳ್ಳಿ ಎಂದು ಕೇಳಿಕೊಳ್ಳುತ್ತೇನೆ ಎಂದರು.
ರಾಮ್‌ದೇವ್ ಅವರನ್ನು ಯೋಗ ಮತ್ತು ಆಯುರ್ವೇದ ಪ್ರಚಾರ ರಾಯಭಾರಿಯಾಗಿ ಹರಿಯಾಣ ಸರ್ಕಾರ ನೇಮಿಸಿದ್ದು ಅವರಿಗೆ ಸಂಪುಟ ದರ್ಜೆಯ ಸ್ಥಾನಮಾನ ನೀಡಲು ನಿರ್ಧರಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


