ಭೂಸ್ವಾಧೀನ ಮಸೂದೆ ವಿರುದ್ಧ ಆಪ್ ಪ್ರತಿಭಟನೆ ವೇಳೆ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಸಾವು
ಕೇಂದ್ರ ಸರ್ಕಾರದ ಉದ್ದೇಶಿಸಿತ ಭೂಸ್ವಾಧೀನ ಮಸೂದೆ ವಿರೋಧಿಸಿ ಬುಧವಾರ ಆಮ್ ಆದ್ಮಿ ಪಕ್ಷ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ರೈತರೊಬ್ಬ ಆತ್ಮಹತ್ಯೆ ಮಾಡಿಕೊಂಡ....

ನವದೆಹಲಿ: ಕೇಂದ್ರ ಸರ್ಕಾರದ ಉದ್ದೇಶಿಸಿತ ಭೂಸ್ವಾಧೀನ ಮಸೂದೆ ವಿರೋಧಿಸಿ ಬುಧವಾರ ಆಮ್ ಆದ್ಮಿ ಪಕ್ಷ ದೆಹಲಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದ ವೇಳೆ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ದೆಹಲಿಯ ಜಂತರ್-ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನಾ ರ್ಯಾಲಿ ವೇಳೆ ರೈತರೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದರು. ತಕ್ಷಣ ಎಚ್ಚೆತ್ತುಕೊಂಡ ಆಪ್ ಕಾರ್ಯಕರ್ತರು ಆ ರೈತನನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ರೈತ ಸಾವನ್ನಪ್ಪಿದ್ದಾರೆ.
ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ದೆಹಲಿ ಉಪ ಮುಖ್ಯಮಂತ್ರಿ ಮನಿಶ್ ಸಿಸೋಡಿಯಾ, ಪ್ರತಿಭಟನೆ ವೇಳೆ ರಾಜಸ್ಥಾನ ಮೂಲದ ರೈತರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ.
ರೈತನ ಆರೋಗ್ಯ ಸ್ಥಿತಿಯ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಆದರೆ ನಾವು ಮತ್ತು ಸರ್ಕಾರ ರೈತನ ಕುಟುಂಬದೊಂದಿಗಿದ್ದು, ಶೀಘ್ರದಲ್ಲೇ ತಾವು ಹಾಗೂ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಬ್ಬರೂ ಆಸ್ಪತ್ರೆಗೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ.
ಭೂಸ್ವಾಧೀನ ಮಸೂದೆ ವಿರುದ್ಧ ಅರವಿಂದ್ ಕೇಜ್ರಿವಾಲ್ ನೇತೃತ್ವದಲ್ಲಿ ಆಮ್ ಆದ್ಮಿ ಪಕ್ಷ ಪ್ರತಿಭಟನೆ ನಡೆಸುತ್ತಿದ್ದು, ಜಂತರ್ ಮಂತರ್‌ನಿಂದ ಸಂಸತ್‌ವರೆಗೆ ಪ್ರತಿಭಟನಾ ರ್ಯಾಲಿ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ಈ ರ್ಯಾಲಿಗೆ ದೆಹಲಿ ಪೊಲೀಸರು ಅವಕಾಶ ನೀಡದಿದ್ದ ಹಿನ್ನೆಲೆಯಲ್ಲಿ ಸಂಸತ್‌ವರೆಗಿನ ಪ್ರತಿಭಟನಾ ಮೆರವಣಿಗೆಯನ್ನು ರದ್ದುಗೊಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


