ಜಯಾ ಪ್ರಕರಣದಲ್ಲಿ ಎಸ್‌ಪಿಪಿ ನೇಮಕ ಅಧಿಕಾರ ತಮಿಳುನಾಡಿಗೆ ಇಲ್ಲ: ಸುಪ್ರೀಂ
ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್(ಎಸ್‌ಪಿಪಿ) ಭವಾನಿಸಿಂಗ್ ಅವರ ನೇಮಕವನ್ನು ಸುಪ್ರೀಂ ಕೋರ್ಟ್ ವಿಸ್ತೃತ ಪೀಠ ಸೋಮವಾರ

ನವದೆಹಲಿ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್(ಎಸ್‌ಪಿಪಿ) ಭವಾನಿಸಿಂಗ್ ಅವರ ನೇಮಕವನ್ನು ಸುಪ್ರೀಂ ಕೋರ್ಟ್ ವಿಸ್ತೃತ ಪೀಠ ಸೋಮವಾರ ಅಸಿಂಧುಗೊಳಿಸಿದೆ. ಆದರೆ ಪ್ರಕರಣದ ತೀರ್ಪಿಗೆ ತಡೆ ನೀಡಲು ನಿರಾಕರಿಸಿದೆ.
ಎಸ್‌ಪಿಪಿ ಭವಾನಿಸಿಂಗ್ ನೇಮಕವನ್ನು ಪ್ರಶ್ನಿಸಿ ಡಿಎಂಕೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಜಯಲಲಿತಾ ಅವರ ಪ್ರಕರಣದಲ್ಲಿ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಅನ್ನು ನೇಮಿಸುವ ಅಧಿಕಾರ ತಮಿಳುನಾಡು ಸರ್ಕಾರಕ್ಕೆ ಇಲ್ಲ. ಕರ್ನಾಟಕ ಸರ್ಕಾರವೇ ಎಸ್‌ಪಿಪಿ ನೇಮಕ ಮಾಡಬೇಕಿತ್ತು ಎಂದು ಹೇಳಿದೆ. ಅಲ್ಲದೆ ಭವಾನಿ ಸಿಂಗ್ ಬದಲಾಗಿ ಮತ್ತೊಬ್ಬ ಎಸ್ ಪಿಪಿಯನ್ನು ನೇಮಕ ಮಾಡದೇ ಇದ್ದದ್ದು ಮತ್ತು ಈ ಬಗ್ಗೆ ಯಾವುದೇ ಉತ್ತರ ಸಲ್ಲಿಸದೇ ಇದ್ದ ಕರ್ನಾಟಕ ಸರ್ಕಾರದ ಧೋರಣೆಯನ್ನೂ ಸುಪ್ರೀಂಕೋರ್ಟ್ ಟೀಕಿಸಿದೆ.
ಈ ಸಂಬಂಧ ಡಿಎಂಕೆ ನಾಯಕ ಕೆ. ಅನ್ಬುಗನ್ ಮತ್ತು ಕರ್ನಾಟಕ ಸರ್ಕಾರ ಏಪ್ರಿಲ್ 28ರೊಳಗೆ ಹೊಸದಾಗಿ ಕರ್ನಾಟಕ ಹೈಕೋರ್ಟ್‌ನಲ್ಲಿ ಲಿಖಿತ ವಾದ ಸಲ್ಲಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ವಿಚಾರಣೆ ನಡೆಸುವ ಅಗತ್ಯ ಇಲ್ಲ ಎಂದಿರುವ ಕೋರ್ಟ್, ಕರ್ನಾಟಕ ಹೈಕೋರ್ಟ್ ಜಯಲಲಿತಾ ಅಕ್ರಮ ಆಸ್ತಿ ಪ್ರಕರಣದ ತೀರ್ಪು ಪ್ರಕಟಿಸಬಹುದು ಎಂದು ನಿರ್ದೇಶನ ನೀಡಿದೆ.
''ಪಬ್ಲಿಕ್ ಪ್ರಾಸಿಕ್ಯೂಟರ್ ಅವರು ಪ್ರಕರಣವನ್ನು ನಿಷ್ಪಕ್ಷಪಾತವಾಗಿ ಪರಿಗಣಿಸುತ್ತಿಲ್ಲ ಎಂಬ ಆರೋಪವಿದ್ದು, ಅವರನ್ನು ಕೈ ಬಿಡಬೇಕು,'' ಎಂದು ಡಿಎಂಕೆ ಪ್ರಧಾನ ಕಾರ‌್ಯದರ್ಶಿ ಕೆ ಅನ್ಬುಗನ್ ಕೋರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


