ಲೋಕಾ ಭ್ರಷ್ಟಾಚಾರ: ಅಶ್ವಿನ್ ರಾವ್ಗೆ ಆ.17ರವರೆಗೆ ನ್ಯಾಯಾಂಗ ಬಂಧನ
ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿದ್ದ ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಅವರ ಪುತ್ರ...

ಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿದ್ದ ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್ ರಾವ್ ಅವರ ಪುತ್ರ ಅಶ್ವಿನ್ ರಾವ್ ಅವರನ್ನು ಲೋಕಾಯುಕ್ತ ವಿಶೇಷ ಕೋರ್ಟ್ ಆಗಸ್ಟ್ 17ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ವಿಶೇಷ ತನಿಖಾ ತಂಡ(ಎಸ್ಐಟಿ)ದ ವಶದಲ್ಲಿದ್ದ ಅಶ್ವಿನ್ ರಾವ್ ಅವರ ಪೊಲೀಸ್ ಕಸ್ಟಡಿ ಅವರಧಿ ಇಂದು ಅಂತ್ಯಗೊಂಡ ಹಿನ್ನೆಲೆಯಲ್ಲಿ, ಅಧಿಕಾರಿಗಳು ಇಂದು ಮಧ್ಯಾಹ್ನ ಲೋಕಾಯುಕ್ತ ವಿಶೇಷ ಕೋರ್ಟ್ಗೆ ಹಾಜರು ಪಡಿಸಿದರು. ವಿಚಾರಣೆ ನಡೆಸಿದ ಕೋರ್ಟ್ ಆರೋಪಿಯನ್ನು 10 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.
ವಿಚಾರಣೆ ವೇಳೆ, ಜೈಲಿನಲ್ಲಿ ವಿಶೇಷ ಸೌಲಭ್ಯ ನೀಡುವಂತೆ ಅಶ್ವಿನ್ ರಾವ್ ಮನವಿ ಮಾಡಿದರು. ಆದರೆ ಆರೋಪಿ ಮನವಿಯನ್ನು ತಿರಸ್ಕರಿಸಿದ ಕೋರ್ಟ್, ವಿಶೇಷ ಸೌಲಭ್ಯ ನೀಡುವುದು ಜೈಲು ಅಧಿಕಾರಿಗಳಿಗೆ ಬಿಟ್ಟಿದ್ದು ಎಂದು ಅಭಿಪ್ರಾಯ ಪಟ್ಟಿದೆ.
ಇನ್ನು ಜಾಮೀನು ಕೋರಿ ಅಶ್ವಿನ್ ರಾವ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ಆಗಸ್ಟ್ 10ರಂದು ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


