ಮತ್ತೆ ಇಬ್ಬರು ರೈತರು ಆತ್ಮಹತ್ಯೆಗೆ ಶರಣು
ರಾಜ್ಯದಲ್ಲಿ ಅನ್ನದಾತನ ಆತ್ಮಹತ್ಯೆ ಸರಣಿ ಮುಂದುವರೆದಿದ್ದು, ಇಂದು ಬೆಳಿಗ್ಗೆ ಮತ್ತೆ ಇಬ್ಬರು ರೈತರು ಆತ್ಮಹತ್ಯೆ ಶರಣಾಗಿರುವ...

ಕಲಬುರ್ಗಿ: ರಾಜ್ಯದಲ್ಲಿ ಅನ್ನದಾತನ ಆತ್ಮಹತ್ಯೆ ಸರಣಿ ಮುಂದುವರೆದಿದ್ದು, ಇಂದು ಬೆಳಿಗ್ಗೆ ಮತ್ತೆ ಇಬ್ಬರು ರೈತರು ಆತ್ಮಹತ್ಯೆ ಶರಣಾಗಿರುವ ಘಟನೆ ವರದಿಯಾಗಿದೆ.
ಅಫ್ಜಲ್ ಪುರ ತಾಲೂಕಿನ ಅವರಳ್ಳಿ ಗ್ರಾಮದ ಪ್ರಶಾಂತ್ ಪಾಟೀಲ್ ಎಂಬ ರೈತ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲ ಮರುಪಾವತಿಗೆ ಎಂದು 3 ಎಕರೆ ಜಮೀನನ್ನು ಮಾರಾಟ ಮಾಡಿದ್ದರು. ಆದರೆ, ಲಕ್ಷಾಂತರ ರೂಪಾಯಿ ಸಾಲ ಮಾಡಿದ್ದ ರೈತ ಪ್ರಶಾಂತ್ ಸಾಲ ತೀರಿಸಲಾಗದೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಲಬುರ್ಗಿಯಲ್ಲಿ ಈವರೆಗೆ 7 ಮಂದಿ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇನ್ನು ಗದಗ ಜಿಲ್ಲೆಯಲ್ಲಿಯೂ ರೈತರ ಆತ್ಮಹತ್ಯೆ ಮುಂದುವರೆದಿದ್ದು, ಶಿರಹಟ್ಟಿ ತಾಲೂಕಿನ ಸುವರ್ಣಗಿರಿ ತಾಂಡದಲ್ಲಿ 46 ವರ್ಷದ ಶಂಕ್ರಪ್ಪ ಲಮಾಣಿ ಎಂಬ ರೈತ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 1 ಲಕ್ಷ ಸಾಲ ಹೊಂದಿದ್ದ ಶಂಕ್ರಪ್ಪ 2 ಎಕರೆ ಜಮೀನಿನಲ್ಲಿ ಜೋಳ ಹಾಗೂ ಹೆಸರು ಕಾಳನ್ನು ಬೆಳೆದಿದ್ದರು. ಆದರೆ, ಮಳೆ ಬಾರದ ಹಿನ್ನಲೆಯಲ್ಲಿ ಬೆಳೆ ಸಂಪೂರ್ಣವಾಗಿ ಒಣಗಿ ಹೋಗಿತ್ತು. ಇದರಿಂದ ಮನನೊಂದ ರೈತ ಶಂಕ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗದಗ ಜಿಲ್ಲೆಯಲ್ಲಿ ಈವರೆಗೆ 10 ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


