ಉಗ್ರ ನಾವೇದ್‌ಗೆ ಸಹಕರಿಸಿದ ಎಲ್‌ಇಟಿ ಸ್ಲೀಪರ್ ಸೆಲ್‌ನ 4 ಸದಸ್ಯರ ಬಂಧನ
ಜಮ್ಮು ಮತ್ತು ಕಾಶ್ಮೀರದ ಉಧಾಂಪುರದಲ್ಲಿ ನಡೆದ ಉಗ್ರರ ದಾಳಿ ವೇಳೆ ಜೀವಂತವಾಗಿ ಸೇರೆ ಸಿಕ್ಕ ಪಾಕಿಸ್ತಾನದ ಉಗ್ರ ನಾವೇದ್ ಅಲಿಯಾಸ್ ಉಸ್ಮಾನ್ ಖಾನ್‌ಗೆ...

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉಧಾಂಪುರದಲ್ಲಿ ನಡೆದ ಉಗ್ರರ ದಾಳಿ ವೇಳೆ ಜೀವಂತವಾಗಿ ಸೇರೆ ಸಿಕ್ಕ ಪಾಕಿಸ್ತಾನದ ಉಗ್ರ ನಾವೇದ್ ಅಲಿಯಾಸ್ ಉಸ್ಮಾನ್ ಖಾನ್‌ಗೆ ಸಹಕರಿಸಿದ ನಾಲ್ವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಶನಿವಾರ ಬಂಧಿಸಿದೆ.
ಎನ್‌ಐಎ ಅಧಿಕಾರಿಗಳು ಹೆಚ್ಚಿನ ವಿಚಾರಣೆಗಾಗಿ ಉಗ್ರ ನಾವೇದ್‌ನನ್ನು ಇಂದು ಜಮ್ಮುವಿನಿಂದ ಕಾಶ್ಮೀರ ಕಣಿವೆಗೆ ಕರೆದೊಯ್ದಿದ್ದು, ಉಗ್ರ ಭಾರತ ಪ್ರವೇಶಿಸಲು ಸಹಕರಿಸಿದ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತ ಉಗ್ರ ನಾವೇದ್ ನೀಡಿದ ಮಾಹಿತಿಯ ಆಧಾರದ ಮೇಲೆ ಎನ್‌ಐಎ ಅಧಿಕಾರಿಗಳು, ಪುಲ್ವಂ ಜಿಲ್ಲೆಯಲ್ಲಿ ನಾಲ್ವರನ್ನು ಬಂಧಿಸಿದ್ದಾರೆ. ಅಲ್ಲದೆ ಇನ್ನಷ್ಟು ಶಂಕಿತರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಬಂಧಿರನ್ನು ಫಯಾಝ್ ಅಹಮ್ಮದ್ ವನಿ, ಜಾವೇದ್ ಅಹಮ್ಮದ್ ವನಿ, ಎಂ.ಡಿ. ಅಲ್ತಫ್ ವನಿ ಹಾಗೂ ಜಾವೇದ್ ಅಹಮ್ಮದ್ ಪರಯ್ ಎಂದು ಗುರುತಿಸಲಾಗಿದೆ.
ಬಂಧಿತ ನಾಲ್ವರು ಆರೋಪಿಗಳು ಕಾಶ್ಮೀರ ಕಣಿವೆಯ ಎಲ್‌ಇಟಿ ಸ್ಲೀಪರ್ ಸೆಲ್‌ನ ಸದಸ್ಯರಾಗಿದ್ದಾರೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ.
ಗುಪ್ತಚರ ಮೂಲಗಳ ಪ್ರಕಾರ, ಉಗ್ರರ ಒಂದು ತಂಡವೇ ಸ್ಲೀಪರ್ ಸೆಲ್‌ನ ಸದಸ್ಯರಾಗಿದ್ದು, ಇವರು ತಮ್ಮ ನಾಯಕರಿಂದ ಸೂಚನೆ ಬರದೇ ಯಾವುದೇ ದಾಳಿಗಳನ್ನು ನಡೆಸುವುದಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


