ಕಳಸಾ ಬಂಡೂರಿ ಯೋಜನೆಗೆ ಆಗ್ರಹ: ನರಗುಂದ ಪಟ್ಟಣ ಮೂರು ದಿನ ಬಂದ್
ಕಳಸಾ ಬಂಡೂರಿ ಯೋಜನೆ ಸೇರಿದಂತೆ ಮತ್ತಿತರ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹಲವು ದಿನಗಳಿಂದ ರೈತರು ನಡೆಸುತ್ತಿರುವ ಹೋರಾಟ ಮುಂದುವರೆದಿದ್ದು, ಇಂದಿನಿಂದ ಮೂರು ದಿನಗಳ ನರಗುಂದ ಪಟ್ಟಣವನ್ನು ಬಂದ್ ಮಾಡುವಂತೆ ರೈತ ಸಂಘಟನೆಗಳು ಭಾನುವಾರ ಘೋಷಣೆ ಮಾಡಿದೆ...

ನರಗುಂದ (ಗದಗ): ಕಳಸಾ ಬಂಡೂರಿ ಯೋಜನೆ ಸೇರಿದಂತೆ ಮತ್ತಿತರ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಹಲವು ದಿನಗಳಿಂದ ರೈತರು ನಡೆಸುತ್ತಿರುವ ಹೋರಾಟ ಮುಂದುವರೆದಿದ್ದು, ಇಂದಿನಿಂದ ಮೂರು ದಿನಗಳ ನರಗುಂದ ಪಟ್ಟಣವನ್ನು ಬಂದ್ ಮಾಡುವಂತೆ ರೈತ ಸಂಘಟನೆಗಳು ಭಾನುವಾರ ಘೋಷಣೆ ಮಾಡಿದೆ.
ರೈತರ ಸಂಘಟನೆಗಳ ಘೋಷಣೆಗೆ ಇದೀಗ ಪಟ್ಟಣದ ವರ್ತಕರ ಸಂಘ ಬೆಂಬಲ ಸೂಚಿಸಿದ್ದು, ವ್ಯಾಪಾರಸ್ಥರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡಿ ಹೋರಾಟದಲ್ಲಿ ಭಾಗವಹಿಸಿದ್ದಾರೆ. ಮಹದಾಯಿ ಹಾಗೂ ಮಲಪ್ರಭಾ ನದಿ ಜೋಡಣೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರೈತರು ಹಲವು ವರ್ಷಗಳಿಂದ ಹೋರಾಟ ನಡೆಸುತ್ತಲೇ ಬಂದಿದೆ. ಅಲ್ಲದೆ, ಕಳೆದ 20 ದಿನಗಳಿಂದ ಶಾಂತಿಯುತ ಹೋರಾಟ ಮಾಡುತ್ತಿದ್ದು, ರೈತರ ಹೋರಾಟಕ್ಕೆ ಇದೀಗ ಸರ್ಕಾರ ಯಾವುದೇ ಪ್ರತಿಕ್ರಿಯೆ ನೀಡದಿರವುದರಿಂದ ರೈತ ಸಂಘಟನೆಗಳು ಕೆಂಡಾಮಂಡಲವಾಗಿದೆ. ಹೀಗಾಗಿ ಹೋರಾಟದ ಬಿಸಿ ಇದೀಗ ಪಟ್ಟಣದ ಸುತ್ತಮುತ್ತಲ ಗ್ರಾಮಗಳಿಗೂ ತಟ್ಟತೊಡಗಿದ್ದು, ನರಗುಂದ ಪಟ್ಟಣದಲ್ಲಿ ಮೂರು ದಿನಗಳ ಕಾಲ ಬಂದ್ ಆಚರಿಸಲಾಗುತ್ತಿದೆ.
ರೈತರ ಬಂದ್ ಕರೆಯಿಂದಾಗಿ ಈಗಾಗಲೇ ಸೂಕ್ತ ವ್ಯವಸ್ಥೆ ಕೈಗೊಂಡಿರುವ ಜಿಲ್ಲಾಡಳಿತವು ಅಹಿತಕರ ಘಟನೆ ನಡೆಯದಂತೆ ಸ್ಥಳದಂತೆ ಬಿಗಿಬಂದೋಬಸ್ತ್ ನ್ನು ನಿಯೋಜಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


