ಕಳಸಾ-ಬಂಡೂರಿ: ಕೇಂದ್ರಕ್ಕೆ ಶೀಘ್ರ ಸರ್ವಪಕ್ಷ ನಿಯೋಗ
ನಾಡಹಬ್ಬ ದಸರಾವನ್ನು ಸರಳವಾಗಿ ಆಚರಿಸುವುದು, ಕಳಸಾ-ಬಂಡೂರಿ ವಿವಾದ ಸಂಬಂಧ ಕೇಂದ್ರ ಸರ್ಕಾರಕ್ಕೆ ಸರ್ವಪಕ್ಷದ ನಿಯೋಗ ಕರೆದೊಯ್ದು ಮನವಿ ಸಲ್ಲಿಸುವುದು ಸೇರಿದಂತೆ ಮಹತ್ವದ ಆಡಳಿತಾತ್ಮಕ ವಿಚಾರಗಳಿಗೆ ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ...

ಬೆಂಗಳೂರು: ನಾಡಹಬ್ಬ ದಸರಾವನ್ನು ಸರಳವಾಗಿ ಆಚರಿಸುವುದು, ಕಳಸಾ-ಬಂಡೂರಿ ವಿವಾದ ಸಂಬಂಧ ಕೇಂದ್ರ ಸರ್ಕಾರಕ್ಕೆ ಸರ್ವಪಕ್ಷದ ನಿಯೋಗ ಕರೆದೊಯ್ದು ಮನವಿ ಸಲ್ಲಿಸುವುದು ಸೇರಿದಂತೆ ಮಹತ್ವದ ಆಡಳಿತಾತ್ಮಕ ವಿಚಾರಗಳಿಗೆ ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.
ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ನಿರ್ಧಾರಗಳು ಹೀಗಿವೆ....
ದಸರಾ ಸರಳ ಆಚರಣೆ : ರಾಜ್ಯದಲ್ಲಿ ಭೀಕರ ಬರದ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ನಾಡಹಬ್ಬ ದಸರಾವನ್ನು ಸರಳವಾಗಿ ಆಚರಿಸುವುದು. ಆದರೆ ಈ ಸಂದರ್ಭದಲ್ಲಿ ನಾಡಿನ ಸಂಸ್ಕೃತಿ ಮತ್ತು ಸಂಪ್ರದಾಯಕ್ಕೆ ಧಕ್ಕೆಯಾಗದಂತೆ ನೋಡಿಕೊಳ್ಳಲಾಗುವುದು. ಮಹದಾಯಿ ತಿರುವು ಹಾಗೂ ಕಳಸಾ-ಬಂಡೂರಿ ಯೋಜನೆ ಅನುಷ್ಠಾ ನ ಸಂಬಂಧ ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕರೆದೊಯ್ಯಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಸಂಪುಟ ಸಭೆ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ನರಗುಂದ, ನವಲಗುಂದ, ಗದಗ, ಧಾರವಾಡದಲ್ಲಿ ಮಹಾದಾಯಿ ವಿಚಾರವಾಗಿ ಕಳೆದ ಕೆಲ ದಿನಗಳಿಂದ
ತೀವ್ರ ಹೋರಾಟ ನಡೆಯುತ್ತಿದೆ. ಕುಡಿ- ಯುವ ನೀರಿನ ಉದ್ದೇಶಕ್ಕಾಗಿ ಮಹದಾಯಿಯಿಂದ 7 ಟಿಎಂಸಿ ನೀರನ್ನು ಮಲ-ಪ್ರಭಾಕ್ಕೆ ಹರಿಸುವಂತೆ ಸಾರ್ವಜನಿಕರು, ಮಠಾಧೀಶರು ಹೋರಾಟ ಮಾಡುತ್ತಿದ್ದಾರೆ. ಆದರೆ ಈ ವಿಚಾರ ನ್ಯಾಯಾಧೀಕರಣದ ಮುಂದೆ ಇರುವುದರಿಂದ ತಕ್ಷಣ ಮಧ್ಯ ಪ್ರವೇಶ ಮಾಡುವಂತೆ ಪ್ರಧಾನಿ ಅವರ ಮೇಲೆ ಒತ್ತಡ ಹೇರಲು ಸರ್ಕಾರ ಸರ್ವಪಕ್ಷಗಳ ನಿಯೋಗ ಕರೆದೊಯ್ಯಲು ನಿರ್ಧರಿಸಿದೆ ಎಂದರು.
ಕುಡಿಯುವ ನೀರಿನ ವಿಚಾರವಾದ್ದರಿಂದ ಪ್ರಧಾನಿ ನರೇಂದ್ರ ಮೋದಿಅವರು ತಕ್ಷಣ ಮಧ್ಯ ಪ್ರವೇಶ ಮಾಡಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ವಿವಾದ ಇತ್ಯರ್ಥಗೊಳಿಸ ಬೇಕು. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವರ ಜತೆ ನಾವು ಸಂಪರ್ಕದಲ್ಲಿದ್ದೇವೆ. ಬುಧವಾರ ಬೆಳಗ್ಗೆ ನಾನು ದೆಹಲಿಗೆ ತೆರಳಿ ಪ್ರಧಾನಿ ಕಾರ್ಯಾಲಯದ ಜತೆ ಸಂಪರ್ಕ ಸಾಧಿಸಿ ಆಗಷ್ಟ್ 14ರೊಳಗೆ ಸರ್ವಪಕ್ಷಗಳ ನಿಯೋಗ ಕರೆದೊಯ್ಯಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.
ಬಿಬಿಎಂಪಿ ಚುನಾವಣೆ ಮುಗಿಯುವರೆಗೆ ಸಚಿವರು ಬೆಂಗಳೂರು ಬಿಡುವಂತಿಲ್ಲ. ಬಿಬಿಎಂಪಿ ಚುನಾವಣೆ ಮುಕ್ತಾಯಗೊಳ್ಳುವವರೆಗೆ ಸಚಿವರು ಬೆಂಗಳೂರು ಬಿಟ್ಟು ತೆರಳದಂತೆ
ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಸಂಪುಟ ಸಭೆ ಬಳಿಕ ಸುಮಾರು ಮುಕ್ಕಾಲು ಗಂಟೆ ಕಾಲ ಬಿಬಿಎಂಪಿ ಚುನಾವಣೆ ಸಂಬಂಧ ಅನೌಪಚಾರಿಕ ಸಭೆ ನಡೆದಿದ್ದು ಉಸುವಾರಿ ಸಚಿವರಿಗೆ ಪಕ್ಷದ ಗೆಲುವಿನ ಜವಾಬ್ದಾರಿ ವಹಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


