ಮಂಡ್ಯದಲ್ಲಿ ಧ್ವಜಾರೋಹಣ ಮಾಡಲು ಬಂದಿದ್ದ ಸಚಿವ ಅಂಬರೀಶ್ ಗೆ ಘೇರಾವ್
69ನೇ ಸ್ವಾತಂತ್ರ್ಯೋತ್ಸವ ಹಿನ್ನಲೆಯಲ್ಲಿ ಮಂಡ್ಯದಲ್ಲಿ ಧ್ವಜಾರೋಹಣ ಮಾಡಲು ಬಂದಿದ್ದ ಸಚಿವ ಅಂಬರೀಶ್ ಗೆ ಜೆಡಿಎಸ್ ಕಾರ್ಯಕರ್ತರು ಘೇರಾವ್ ಹಾಕಿದ್ದಾರೆ...

Published On :
ಮಂಡ್ಯ: 69ನೇ ಸ್ವಾತಂತ್ರ್ಯೋತ್ಸವ ಹಿನ್ನಲೆಯಲ್ಲಿ ಮಂಡ್ಯದಲ್ಲಿ ಧ್ವಜಾರೋಹಣ ಮಾಡಲು ಬಂದಿದ್ದ ಸಚಿವ ಅಂಬರೀಶ್ ಗೆ ಜೆಡಿಎಸ್ ಕಾರ್ಯಕರ್ತರು ಘೇರಾವ್ ಹಾಕಿದ್ದಾರೆ.
ವಸತಿ ಸಚಿವರಾಗಿರುವ ಅಂಬರೀಶ್ ಮಂಡ್ಯದ ಜಿಲ್ಲಾ ಉಸ್ತುವಾರಿಯಾಗಿದ್ದು ಇಂದು ಧ್ವಜಾರೋಹಣ ಮಾಡಲು ಬಂದಿದ್ದಂತ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರು ಘೇರಾವ್ ಹಾಕಿ ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿದರು.
ಮಂಡ್ಯದಲ್ಲಿ ರೈತರ ಸರಣಿ ಆತ್ಮಹತ್ಯೆ ನಡೆಯುತ್ತಿದ್ದರೂ ಯಾವುದೇ ಕ್ರಮಕೈಗೊಂಡಿದ್ದಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಪ್ರತಿಭಟನಾಕಾರರ ಜತೆ ಹಸನ್ಮುಖಿಯಾಗಿ ಮಾತನಾಡಿದ ಅಂಬರೀಶ್, ಈ ಸಂಬಂಧ ರಾಜ್ಯ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಂಡಿದೆ ಎಂದರು. ಅಲ್ಲದೆ ಒಳ್ಳೆ ಕೆಲಸಗಳಾಗುವಾಗ ಅದಕ್ಕೆ ಅಡ್ಡಿ ಮಾಡಬಾರದು ಎಂದು ಪ್ರತಿಭಟನಾಕಾರರ ಮನವೊಲಿಸುವ ಪ್ರಯತ್ನ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


