ಪ್ರಧಾನ ಸುದ್ದಿ

ಅಶ್ವಿನ್ ರಾವ್ ವಿರುದ್ಧ ಮತ್ತೊಂದು ಎಫ್ಐಆರ್

ಲೋಕಾಯುಕ್ತ ಸಂಸ್ಥೆಯ ಭ್ರಷ್ಟಾಚಾರ ಪ್ರಕರಣ ಸಂಬಂಧ ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್‍ರಾವ್ ಅವರ ಪುತ್ರ ಅಶ್ವಿನ್‍ರಾವ್ ವಿರುದ್ಧ ಮಂಗಳವಾರ...

ಅಶ್ವಿನ್ ರಾವ್ ವಿರುದ್ಧ ಮತ್ತೊಂದು ಎಫ್ಐಆರ್
ಅಶ್ವಿನ್ ರಾವ್
Published On :

ಬೆಂಗಳೂರು: ಲೋಕಾಯುಕ್ತ ಸಂಸ್ಥೆಯ ಭ್ರಷ್ಟಾಚಾರ ಪ್ರಕರಣ ಸಂಬಂಧ ಲೋಕಾಯುಕ್ತ ನ್ಯಾಯಮೂರ್ತಿ ವೈ.ಭಾಸ್ಕರ್‍ರಾವ್ ಅವರ ಪುತ್ರ ಅಶ್ವಿನ್‍ರಾವ್ ವಿರುದ್ಧ ಮಂಗಳವಾರ ಮತ್ತೊಂದು ಎಫ್ ಐಆರ್ ದಾಖಲಾಗಿದೆ. ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಉದಯಶಂಕರ್ ಎಂಬುವವರು ವಿಶೇಷ ತನಿಖಾ ತಂಡಕ್ಕೆ ದೂರು ನೀಡಿದ್ದಾರೆ. ದೂರಿನ ಅನ್ವಯ ಅಶ್ವಿನ್ ರಾವ್, ವಿ.ಭಾಸ್ಕರ್ ಮತ್ತು ನರಸಿಂಹ ವಿರುದ್ಧ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಅಶ್ವಿನ್‍ರಾವ್ ವಿರುದ್ಧ ದಾಖಲಾಗಿರುವ ಪ್ರಕರಣಗಳ ಸಂಖ್ಯೆ ನಾಲ್ಕಕ್ಕೇರಿವೆ. ಅಶ್ವಿನ್ ರಾವ್ ಮತ್ತು ದೂರುದಾರ ಉದಯಶಂಕರ್ ನಡುವೆ ಹಣಕಾಸಿನ ಬೆದರಿಕೆಯಲ್ಲಿ ವಿ.ಭಾಸ್ಕರ್ ಮತ್ತು ನರಸಿಂಹ ಮಧ್ಯವರ್ತಿಗಳಾಗಿ ಕೆಲಸ ಮಾಡುತ್ತಿದ್ದರು. ದೂರುದಾರ ಕೆಪಿಸಿಸಿ ಸದಸ್ಯ ಮತ್ತು ಉದ್ಯಮಿ ಪಿ.ಎನ್.ಕೃಷ್ಣಮೂರ್ತಿ ನೀಡಿರುವ ದೂರಿನಲ್ಲಿಯೂ ಸಹ ವಿ.ಭಾಸ್ಕರ್ ಮತ್ತು ನರಸಿಂಹ ಹೆಸರು ಪ್ರಸ್ತಾಪವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.