ಪ್ರಧಾನ ಸುದ್ದಿ

ತಪ್ಪು ಮತದಾನ ಬಿಹಾರದ ಹಳಿತಪ್ಪಿಸುತ್ತದೆ: ಅಮಿತ್ ಷಾ

ಬಿಹಾರದ ಜನತೆ ಮುಂದಿನ ವಿಧಾನಸಭಾ ಚುನಾವಣೆಗಳಲ್ಲಿ ಸರಿಯಾದ ನಿರ್ಧಾರ ತೆಗೆದುಕೊಳ್ಳಲು ವಿಫಲವಾದರೆ ಬಿಹಾರದ ಅಭಿವೃದ್ಧಿಗೆ ತೊಂದರೆಯಾಗುತ್ತದೆ ಎಂದು ಬಿಜೆಪಿ

ತಪ್ಪು ಮತದಾನ ಬಿಹಾರದ ಹಳಿತಪ್ಪಿಸುತ್ತದೆ: ಅಮಿತ್ ಷಾ
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ
Published On :

ಪಾಟ್ನಾ: ಬಿಹಾರದ ಜನತೆ ಮುಂದಿನ ವಿಧಾನಸಭಾ ಚುನಾವಣೆಗಳಲ್ಲಿ ಸರಿಯಾದ ನಿರ್ಧಾರ ತೆಗೆದುಕೊಳ್ಳಲು ವಿಫಲವಾದರೆ ಬಿಹಾರದ ಅಭಿವೃದ್ಧಿಗೆ ತೊಂದರೆಯಾಗುತ್ತದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಗುರುವಾರ ಹೇಳಿದ್ದರೆ.

ಬಿಹಾರದ ಯುದ್ಧದಲ್ಲಿ ಅಭಿವೃದ್ಧಿ ಪ್ರಮುಖ ವಿಷಯವಾಗಿದೆ ಎಂದು ತಿಳಿಸಿರುವ ಅವರು "ಮುಂದಿನ ವಿಧಾನಸಭಾ ಚುನಾವಣೆಗಳನ್ನು ಅಭಿವೃದ್ಧಿ ವಿಷಯದ ಮೇಲೆ ಸ್ಪರ್ಧಿಸಬೇಕು" ಎಂದಿದ್ದಾರೆ.

ಭಾರತೀಯ ಜನತಾ ಪಕ್ಷ ಆಡಳಿತ ನಡೆಸುತ್ತಿರುವ ಎಲ್ಲ ರಾಜ್ಯಗಳು ಅಭಿವೃದ್ಧಿ ಹೊಂದಿವೆ ಎಂದು ಕೂಡ ಅವರು ತಿಳಿಸಿದ್ದಾರೆ.

"ಬಿಹಾರ ಚುನಾವಣೆಗಳು ಮುಂದಿನ ಐದು ವರ್ಷದ ಭವಿಷ್ಯವನ್ನಷ್ಟೇ ನಿರ್ಧರಿಸುವುದಿಲ್ಲ. ಮುಂದಿನ ೧೫ ವರ್ಷಗಳ ಕಾಲ ಬಿಹಾರವನ್ನು ಹೇಗೆ ಮುನ್ನಡೆಸಬೇಕು ಎಂಬುದನ್ನು ನಿರ್ಧರಿಸುತ್ತದೆ.

"ಜನರು ಸರಿಯಾದ ನಿರ್ಧಾರವನ್ನು ತೆಗೆದುಕೊಳ್ಳಲು ವಿಫಲರಾದರೆ, ಅದು ಅಭಿವೃದ್ಧಿ ಕೆಲಸಗಳಿಗೆ ತೊಂದರೆಯಾಗುತ್ತದೆ" ಎಂದಿದ್ದಾರೆ.

ಬಿಜೆಪಿ ಆಡಳಿತದ ರಾಜಸ್ಥಾನ, ಗುಜರಾತ್, ಗೋವಾ ಮತ್ತು ಮಧ್ಯಪ್ರದೇಶ ರಾಜ್ಯಗಳ ಉದಾಹರಣೆಗಳನ್ನು ನೀಡಿದ ಷಾ "ನಮ್ಮ ಸರ್ಕಾರ ಅದೇ ಅಭಿವೃದ್ಧಿಗಳನ್ನು ಇಲ್ಲಿ ಕೂಡ ಸಾಧಿಸುತ್ತದೆ" ಎಂದಿದ್ದಾರೆ.

ಬಿಜೆಪಿ ಪಕ್ಷದ ಜೊತೆ ಮೈತ್ರಿ ಮಾಡಿಕೊಂಡಿದ್ದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಬಿಜೆಪಿ ಪಕ್ಷವನ್ನು ಕೋಮುವಾದಿ ಎಂದು ಕರೆಯಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.