ಲೋಕಾ ಹಗರಣ: 10ನೇ ಆರೋಪಿ ಸೆರೆ
ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರದ ತನಿಖೆ ನಡೆಸಿರುವ ಎಸ್‍ಐಟಿ ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದು ಇದರೊಂದಿಗೆ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಸಂಖ್ಯೆ ಹತ್ತಕ್ಕೆ ಏರಿದೆ...

ಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರದ ತನಿಖೆ ನಡೆಸಿರುವ ಎಸ್‍ಐಟಿ ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದು ಇದರೊಂದಿಗೆ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಸಂಖ್ಯೆ ಹತ್ತಕ್ಕೆ ಏರಿದೆ.
ನರಸಿಂಹರಾವ್ ಬಂಧಿತ ಆರೋಪಿ. ಇವರು ಲೋಕಾಯುಕ್ತ ನ್ಯಾ. ವೈ.ಭಾಸ್ಕರ್‍ರಾವ್ ಅವರ ಪತ್ನಿಯ ಸಹೋದರಿಯ ಮಗ ಎಂದು ಹೇಳಲಾಗಿದೆಯಾದರೂ, ಪೊಲೀಸರು ಇದನ್ನು ಖಚಿತಪಡಿಸಿಲ್ಲ. ಈ ಬಗ್ಗೆ ಪರಿಶೀಲನೆ ನಡೆಸಬೇಕಿದೆ ಎಂದಿದ್ದಾರೆ. ಗುರುವಾರ ಹೈದರಾಬಾದ್‍ನಲ್ಲಿ ನರಸಿಂಹರಾವ್ ಅವರನ್ನು ಬಂಧಿಸಿದ ಎಸ್‍ಐಟಿ ಅಧಿಕಾರಿಗಳ ತಂಡ, ಶುಕ್ರವಾರ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿ ಆ.26ರವರೆಗೆ ತಮ್ಮ ವಶಕ್ಕೆ ಪಡೆದರು.
ಉದ್ಯಮಿ ಪಿ.ಎನ್.ಕೃಷ್ಣಮೂರ್ತಿ ದಾಖಲಿಸಿದ್ದ ಪ್ರಕರಣದಲ್ಲಿ ಈ ಆರೋಪಿಯನ್ನು ಬಂಧಿಸಲಾಗಿದೆ. ಪ್ರಕರಣ-ದಲ್ಲಿ ಇವರು ಐದನೇ ಆರೋಪಿಯಾಗಿದ್ದಾರೆ. ಹೈದರಾಬಾದ್‍ನ ಲಕಡಿಕಪೂಲ್ ಬಳಿಯ ಆದರ್ಶನಗರದಲ್ಲಿರುವ ಸ್ನೇಹಿತ ವೆಂಕಟೇಶ್ವರ್ ರಾವ್‍ನ ಕಚೇರಿಯಲ್ಲಿ ಗುರುವಾರ ರಾತ್ರಿ 9.15ಕ್ಕೆ ನರಸಿಂಹ ರಾವ್‍ನನ್ನು ಬಂಧಿಸಿ ನಗರಕ್ಕೆ ಕರೆತರಲಾಗಿದೆ. ಶುಕ್ರವಾರ ಬೆಳಗ್ಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಅಧಿಕಾರಿಗಳು ಸಂಜೆ 4.30ಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ವಿಚಾರಣೆಗಾಗಿ ವಶಕ್ಕೆ ನೀಡುವಂತೆ ಎಸ್‍ಐಟಿ ಅಧಿಕಾರಿಗಳ ಮನವಿ ಪುರಸ್ಕರಿಸಿದ ನ್ಯಾಯಾಧೀಶ ವಿ.ಜಿ.- ಬೋ-ಪಯ್ಯ, ಆ.26ರವೆರೆಗೆ ಪೊಲೀಸ್ ವಶಕ್ಕೆ ನೀಡಿದರು. ಲೋಕಾಯುಕ್ತರ ಪುತ್ರ ಅಶ್ವಿನ್‍ರಾವ್ ಗೆ ಕೃಷ್ಣಮೂರ್ತಿಯವರನ್ನು ಪರಿಚಯಿಸಿ ಹಣದ ಬೇಡಿಕೆ ಇಟ್ಟಿರುವ ಆರೋಪದ ಮೇಲೆ ಆರೋಪಿ ನರಸಿಂಹರಾವ್‍ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


