ಶಾಂತಿಯುತ ಮತ ಎಣಿಕೆಗೆ ಬಿಗಿಭದ್ರತೆ
ಬಿಬಿಎಂಪಿ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಮಂಗಳವಾರ ಮತಎಣಿಕೆ ನಡೆಯುವ ಕೇಂದ್ರಗಳಿಗೆ ಬಿಗಿ ಭದ್ರತೆ ಒದಗಿಸಲಾಗಿದೆ...

ಬೆಂಗಳೂರು: ಬಿಬಿಎಂಪಿ ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಮಂಗಳವಾರ ಮತಎಣಿಕೆ ನಡೆಯುವ ಕೇಂದ್ರಗಳಿಗೆ ಬಿಗಿ ಭದ್ರತೆ ಒದಗಿಸಲಾಗಿದೆ.
ಎಣಿಕೆ ಕೇಂದ್ರಗಳ ಬಳಿ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿ ದೆ. ಈ ಹಿನ್ನೆಲೆಯಲ್ಲಿ ಸಿಎಆರ್, ಕೆಎಸ್ ಆರ್‍ಪಿ ಸೇರಿದಂತೆ ಒಟ್ಟು 8,500 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್.ಎಸ್. ಮೇಘರಿಕ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಂದು ಮತ ಎಣಿಕೆ ಕೇಂದ್ರದ ಬಳಿ ಒಂದರಂತೆ 25 ಸ್ಟ್ಯಾಟಿಕ್ ವೈರ್‍ಲೆಸ್, ಉಸ್ತುವಾರಿಗಾಗಿ ನಗರ ಪೊಲೀಸ್ ಆಯುಕ್ತರು,
ನಾಲ್ವರು ಹೆಚ್ಚುವರಿ ಪೊಲೀಸ್ ಆಯುಕ್ತರು, ಇಬ್ಬರು ಜಂಟಿ ಪೊಲೀಸ್ ಆಯುಕ್ತರು ಹಾಗೂ 16 ಮಂದಿ ಡಿಸಿಪಿಗಳನ್ನು ನಿಯೋಜಿಸಲಾಗಿದೆ ಎಂದರು. 197 ವಾರ್ಡ್‍ಗಳ ಮತ ಎಣಿಕೆ
ಕೇಂದ್ರಗಳನ್ನು 27 ವಿಧಾನಸಭಾ ಕ್ಷೇತ್ರಗಳಲ್ಲಿ ತೆರೆಯಲಾಗಿದೆ. ಮಂಗಳವಾರ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ. ಪ್ರತಿ ಸ್ಟ್ರಾಂಗ್ ರೂಂನ ಜವಾಬ್ದಾರಿಯನ್ನು ಎಸಿಪಿಗೆ ನೀಡಲಾಗಿದೆ ಎಂದರು.
ಮೂರು ದಿನ ನಿಷೇಧಾಜ್ಞೆ: ಮತ ಎಣಿಕೆ ವೇಳೆ ಹಾಗೂ ನಂತರದ ದಿನಗಳಲ್ಲಿ ಅಹಿತಕರ ಘಟನೆ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಮಂಗಳವಾರ ಬೆಳಗ್ಗೆ 6 ಗಂಟೆಯಿಂದ ಗುರುವಾರ ಮಧ್ಯಾಹ್ನ 12 ಗಂಟೆಯವರೆಗೆ, ಮೂರು ದಿನಗಳ ಕಾಲ ನಿಷೇಧಾಜ್ಞೆಜಾರಿಗೊಳಿಸಿ ಆದೇಶಿಸಲಾಗಿದೆ. ಮಂಗಳವಾರ ಬೆಳಗ್ಗೆ 6 ಗಂಟೆಯಿಂದ ಬುಧವಾರ ಬೆಳಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟವನ್ನೂ ನಿಷೇಧಿಸಲಾಗಿದೆ.
ಬಂದೋಬಸ್ತ್
- ಸ್ಟ್ರಾಂಗ್ ರೂಂ ಬಳಿ ಸಶಸuಉ ಪೊಲೀಸ್ ಪಡೆ (24 ಗಂಟೆ)
- 75 ಎಆರ್‍ಎಸ್‍ಐ/ಆರ್‍ಎಸ್‍ಐ, 75 ಎಎಚ್‍ಸಿ, 225 ಎಪಿಸಿ
- ಸಿವಿಲ್ ಪೊಲೀಸ್: 25 ಎಸಿಪಿ, 75ಪಿಐ, 250 ಪಿಎಸ್‍ಐ/ಎಎಸ್‍ಐ, 500 ಎಚ್‍ಸಿ, 2500 ಪಿಸಿ.
- ಕೆಎಸ್‍ಆರ್‍ಪಿ ಪಡೆ: 62 ಪ್ಲಟೂನ್‍ನ (1,860 ಸಿಬ್ಬಂದಿ), 14 ಪ್ಲಟೂನ್ ಸಿಎಆರ್ ಹಾಗೂ 3,000 ಹೋಂಗಾಡ್ರ್ಸ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


