ಮಾಜಿ ಮೇಯರ್ ಶಾಂತಾಕುಮಾರಿಗೆ ಗೆಲುವು
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಗೋವಿಂದರಾಜ ನಗರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಾಜಿ ಮೇಯರ್ ಎನ್ ಶಾಂತಾಕುಮಾರಿ ಅವರು ಗೆಲುವು ಸಾಧಿಸಿದ್ದಾರೆ.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಗೋವಿಂದರಾಜ ನಗರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಾಜಿ ಮೇಯರ್ ಎನ್ ಶಾಂತಾಕುಮಾರಿ ಅವರು ಗೆಲುವು ಸಾಧಿಸಿದ್ದಾರೆ.
ಇನ್ನು ದತ್ತಾತ್ರೆಯ ದೇವಾಸ್ಥಾನ ವಾರ್ಡ್ನಲ್ಲಿ ಕಾಂಗ್ರೆಸ್ ಪಕ್ಷದ ಸತ್ಯನಾರಾಯಣ ಅವರು ಗೆಲುವು ಸಾಧಿಸಿದ್ದು, ಯಲಂಹಕದ ಚೌಡೇಶ್ವರಿ ವಾರ್ಡ್ ನಿಂದ ಸ್ಪರ್ಧಿಸಿದ್ದ ಯಲಹಂಕ ಶಾಸಕ ವಿಶ್ವನಾಥ್ ಅವರ ಪತ್ನಿ ವಾಣಿಶ್ರೀ ಅವರು ಸೋಲು ಕಂಡಿದ್ದಾರೆ. ಮಲ್ಲಸಂದ್ರದಲ್ಲಿ ಬಿಜೆಪಿ ಅಭ್ಯರ್ಥಿ ಎನ್ ಲೋಕೇಶ್ ಅವರು ಮುನ್ನಡೆ ಕಾಯ್ದುಕೊಂಡಿದ್ದರೆ, ಜಾಲಹಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜೆಎನ್ ಶ್ರೀನಿವಾಸ ಮೂರ್ತಿ ಅವರು ಗೆಲುವು ಸಾಧಿಸಿದ್ದಾರೆ. ಜೆಪಿ ಪಾರ್ಕ್ ವಾರ್ಡ್ ನಲ್ಲಿ ಬಿಜೆಪಿಯ ಮಮತಾ ಅವರು ಗೆಲುವು ಸಾಧಿಸಿದ್ದಾರೆ.ವಿಜಯನಗರದ ಕೆಂಪಾಪುರ ಅಗ್ರಹಾರದಿಂದ ಸ್ಪರ್ಧಿಸಿದ್ದ ಪಕ್ಷೇತರ ಅಭ್ಯರ್ಥಿ ಗಾಯತ್ರಿ ಅವರು ಗೆಲುವು ಸಾಧಿಸಿದ್ದಾರೆ.
ಇನ್ನು ಕೆಆರ್ ಮಾರುಕಟ್ಟೆಯಲ್ಲಿ ಜೆಡಿಎಸ್ ನಜೀಮಾ ಖಾನಂ ಅವರು ಗೆಲುವು ಸಾಧಿಸಿದ್ದರೆ, ಸಿದ್ಧಾಪುರದಲ್ಲಿ ಕಾಂಗ್ರೆಸ್ ನ ಎಂ. ಉದಯ್ ಶಂಕರ್ ಅವರು ಮುನ್ನಡೆ ಕಾಯ್ದುಕೊಂಡಿದ್ದಾರೆ. ಜಕ್ಕೂರು ವಾರ್ಡ್ ನಲ್ಲಿ ಬಿಜೆಪಿ ಅಭ್ಯರ್ಥಿ ಕೆವಿ ಮುನೀಂದ್ರ ಕುಮಾರ್ ಅವರು ಗೆಲುವು ಸಾಧಿಸಿದ್ದರೆ, ವಿದ್ಯಾರಣ್ಯ ಪುರ ವಾರ್ಡ್ ನಲ್ಲಿ ಬಿಜೆಪಿಯ ಕುಸುಮಾ ಹೆಚ್ ಅವರು ಗೆಲುವು ಸಾಧಿಸಿದ್ದಾರೆ. ಶೆಟ್ಟಿಹಳ್ಳಿಯಲ್ಲಿ ಕೆನಾಗಭೂಷಣ್ ಅವರು ಗೆಲುವು ಸಾಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


