ದೆಹಲಿಯ ಔರಂಗಜೇಬ್ ರಸ್ತೆಗೆ ಅಬ್ದುಲ್ ಕಲಾಂ ಹೆಸರು ಮರುನಾಮಕರಣ
ದೆಹಲಿಯಲ್ಲಿರುವ ಔರಂಗಜೇಬ್ ರಸ್ತೆಗೆ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ ಹೆಸರನ್ನು ಮರುನಾಮನರಣ ಮಾಡಲು ನವದೆಹಲಿ ಪುರಸಭೆ ಒಪ್ಪಿಗೆ ನೀಡಿದೆ.

ನವದೆಹಲಿ: ದೆಹಲಿಯಲ್ಲಿರುವ ಔರಂಗಜೇಬ್ ರಸ್ತೆಗೆ ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ ಹೆಸರನ್ನು ಮರುನಾಮನರಣ ಮಾಡಲು ನವದೆಹಲಿ ಪುರಸಭೆ ಒಪ್ಪಿಗೆ ನೀಡಿದೆ.
ಇತ್ತೀಚೆಗೆ ನಿಧನರಾದ ಅಬ್ದುಲ್ ಕಲಾಂ ಅವರಿಗೆ ಗೌರವ ಸೂಚಕವಾಗಿ ದೆಹಲಿಯ ಔರಂಗಜೆಬ್ ರಸ್ತೆಗೆ ಅಬ್ದುಲ್ ಕಲಾಂ ಅವರ ಹೆಸರನ್ನಿಡಲು ಸಾರ್ವಜನಿಕರಿಂದ ಒತ್ತಡ ಉಂಟಾಗಿತ್ತು. ಈ ವಿಷಯವನ್ನು ದೆಹಲಿ ಪುರಸಭೆ ಮುಂದಿಡಲಾಗಿತ್ತು, ಪ್ರಸ್ತಾವನೆಗೆ ಪುರಸಭೆ ಅವಿರೋಧ ಒಪ್ಪಿಗೆ ಸೂಚಿಸಿದ್ದು ಶೀಘ್ರವೇ ದೆಹಲಿಯ ಔರಂಗಜೇಬ್ ರಸ್ತೆ ಅಬ್ದುಲ್ ಕಲಾಂ ಅವರ ಹೆಸರನ್ನು ನಾಮಕರಣ ಮಾಡಲಾಗುತ್ತದೆ ಎಂದು ಎನ್.ಡಿ.ಎಂ.ಸಿ ಉಪಾಧ್ಯಕ್ಷ ಕರಣ್ ಸಿಂಗ್ ತನ್ವರ್ ಹೇಳಿದ್ದಾರೆ.
ಎನ್.ಡಿ.ಎಂ ಸಿ ಔರಂಗಜೇಬ್ ರಸ್ತೆಗೆ ಅಬ್ದುಲ್ ಕಲಾಂ ಅವರ ಹೆಸರನ್ನು ಮರುನಾಮಕರಣ ಮಾಡಲು ಒಪ್ಪಿಗೆ ನೀಡಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


