ಎಂಎಂ ಕಲಬುರ್ಗಿ ಹತ್ಯೆ: ಸಿಐಡಿಯಿಂದ ತನಿಖೆ; ಸಿಎಂ
ಹಿರಿಯ ಸಂಶೋಧಕ ಡಾ. ಎಂ.ಎಂ. ಕಲಬುರ್ಗಿ ಅವರ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆ ವಹಿಸಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಬೆಂಗಳೂರು: ಹಿರಿಯ ಸಂಶೋಧಕ ಡಾ. ಎಂ.ಎಂ. ಕಲಬುರ್ಗಿ ಅವರ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆ ವಹಿಸಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.
ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕಲಬುರ್ಗಿ ಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸುತ್ತೇವೆ. ಆರೋಪಿಗಳು ಯಾರೇ ಆಗಿದ್ದರೂ ಬಂಧಿಸುತ್ತೇವೆ ಎಂದು ತಿಳಿಸಿದರು.
ನಿನ್ನೆ ಧಾರವಾಡದಲ್ಲಿ ನಡೆದ ಕಲಬುರ್ಗಿ ಹತ್ಯೆ ಪ್ರಕರಣವನ್ನು ಸಿಬಿಐ ಅಥವಾ ಸಿಐಡಿಗೆ ಕೊಡಿ ಎಂದು ಮಠಾಧೀಶರು ಒತ್ತಾಯಿಸುತ್ತಿದ್ದರು. ಈ ಬಗ್ಗೆ ಪ್ರತಿಕ್ರಿಸಿದ್ದ ಸಿದ್ದರಾಮಯ್ಯ, ಕಲಬುರ್ಗಿ ಅವರ ಹತ್ಯೆ ಕುರಿತು ಸದ್ಯ ವಿಶೇಷ ಪೊಲೀಸ್ ತಂಡವನ್ನು ರಚಿಸಿ ತನಿಖೆ ನಡೆಸಲಾಗುತ್ತಿದೆ. ಅಗತ್ಯ ಬಿದ್ದರೆ ಉನ್ನತ ಮಟ್ಟದ ತನಿ ಸಂಸ್ಥೆಗೆ ನೀಡಲಾಗುವುದು ಎಂದು ತಿಳಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


