ಕವಿವಿ ಮಣ್ಣಲ್ಲಿ ಮಣ್ಣಾದ ಎಂಎಂ ಕಲಬುರ್ಗಿ
ವೈಚಾರಿಕ ನಿಲುವು, ನಿಷ್ಠುರ ಸತ್ಯದ ಪ್ರತಿಪಾದನೆಗೆ ಹೆಸರಾಗಿದ್ದ ಹಿರಿಯ ಸಂಶೋಧಕ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಎಂ.ಎಂ.ಕಲಬುರ್ಗಿ (77ವರ್ಷ)...

ಧಾರವಾಡ: ವೈಚಾರಿಕ ನಿಲುವು, ನಿಷ್ಠುರ ಸತ್ಯದ ಪ್ರತಿಪಾದನೆಗೆ ಹೆಸರಾಗಿದ್ದ ಹಿರಿಯ ಸಂಶೋಧಕ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಎಂ.ಎಂ.ಕಲಬುರ್ಗಿ (77ವರ್ಷ) ಅವರು ಸೋಮವಾರ ಮಧ್ಯಾಹ್ನ ಮಣ್ಣಲ್ಲಿ ಮಣ್ಣಾಗಿದ್ದಾರೆ.
ಭಾನುವಾರ ಬೆಳಗ್ಗೆ ಆಗುಂತಕರ ಗುಂಡಿಗೆ ಬಲಿಯಾಗಿದ್ದ ಎಂ.ಎಂ. ಕಲಬುರ್ಗಿ ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ಕರ್ನಾಟಕ ವಿಶ್ವವಿದ್ಯಾಲಯ(ಕವಿವಿ)ದ ಆವರಣದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಿತು. ಅಂತ್ಯಕ್ರಿಯೆ ಸ್ಥಳದಲ್ಲಿ ಹತ್ಯೆ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ಕರ್ನಾಟಕ ಕಾಲೇಜ್ ಆವರಣದಲ್ಲಿ ಅಂತಿಮ ದರ್ಶನದ ಬಳಿಕ ಮೃತದೇಹವನ್ನು ಮೆರವಣಿಗೆ ಮೂಲಕ ಕವಿವಿ ಆವರಣಕ್ಕೆ ತರಲಾಗಿತ್ತು. ಈ ವೇಳೆ ಸಾವಿರಾರು ಮಂದಿ ಕಲಬುರ್ಗಿಯವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ನಂತರ ಹಿಂದೂ ಧಾರ್ಮಿಕ ವಿಧಿವಿಧಾನದಂತೆ ಅಂತ್ಯಸಂಸ್ಕಾರ ನಡೆಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


