ಪ್ರಧಾನ ಸುದ್ದಿ

ಕಲಬುರ್ಗಿ ಹತ್ಯೆ ಪ್ರಕರಣದ ತನಿಖೆಗೆ 4 ತಂಡ ರಚನೆ

ಹಿರಿಯ ಸಂಶೋಧಕ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣದ ತನಿಖೆಗೆ ಪೊಲೀಸರು ನಾಲ್ಕು...

ಕಲಬುರ್ಗಿ ಹತ್ಯೆ ಪ್ರಕರಣದ ತನಿಖೆಗೆ 4 ತಂಡ ರಚನೆ
ಎಂ.ಎಂ.ಕಲಬುರ್ಗಿ ಹತ್ಯೆ ಖಂಡಿಸಿ ನಿನ್ನೆ ಧಾರವಾಡದಲ್ಲಿ ಪ್ರತಿಭಟನೆ ನಡೆಸಲಾಯಿತು.
Published On :

ಬೆಂಗಳೂರು: ಹಿರಿಯ ಸಂಶೋಧಕ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ.ಎಂ.ಎಂ.ಕಲಬುರ್ಗಿ ಹತ್ಯೆ ಪ್ರಕರಣದ ತನಿಖೆಗೆ ಪೊಲೀಸರು ನಾಲ್ಕು ತಂಡಗಳನ್ನು ರಚಿಸಿದ್ದಾರೆ.

ಕಲಬುರ್ಗಿ ಅವರ ಹತ್ಯೆ ಪ್ರಕರಣದ ತನಿಖೆ ನಡೆಯುತ್ತಿದ್ದು, ಆರೋಪಿಗಳ ಬಂಧನಕ್ಕಾಗಿ ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಪಿ.ಎಚ್. ರಾಣೆ ಅವರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ತನಿಖೆಯ ಅಂಗವಾಗಿ ಮಹಾರಾಷ್ಟ್ರ ಹಾಗೂ ರಾಜ್ಯದ ಇತರೆ ಭಾಗಗಳಿಗೆ ಪೊಲೀಸ್ ತಂಡಗಳನ್ನು ಕಳುಹಿಸಲಾಗಿದೆ ಎಂದು ರಾಣೆ ಹೇಳಿದ್ದಾರೆ.

ಭಾನುವಾರ ಬೆಳಗ್ಗೆ ಧಾರವಾಡದ ಕಲ್ಯಾಣನಗರದಲ್ಲಿರುವ ಅವರ ನಿವಾಸದಲ್ಲೇ ಕಲಬುರ್ಗಿ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿ, ಪರಾರಿಯಾಗಿದ್ದಾರೆ. ಇದವರೆಗೂ ಆರೋಪಿಗಳ ಸುಳಿವು ಸಿಕ್ಕಿಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.