ಲೋಕಸಭೆ ಹೆಚ್ಚುವರಿ ಕಾರ್ಯದರ್ಶಿಯಾಗಿ ಕನ್ನಡಿಗ ವಿ.ಆರ್.ರಮೇಶ್ ನೇಮಕ
ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಕನ್ನಡಿಗ ವಿ.ಆರ್.ರಮೇಶ್ ಅವರನ್ನು ಲೋಕಸಭಾ ಹೆಚ್ಚುವರಿ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ...

ನವದೆಹಲಿ: ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಕನ್ನಡಿಗ ವಿ.ಆರ್.ರಮೇಶ್ ಅವರನ್ನು ಲೋಕಸಭಾ ಹೆಚ್ಚುವರಿ ಕಾರ್ಯದರ್ಶಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಲೋಕಸಭಾ ಜಂಟಿ ಕಾರ್ಯದರ್ಶಿಯಾಗಿದ್ದ ರಮೇಶ್ ಅವರಿಗೆ ಸ್ಪೀಕರ್ ಹೆಚ್ಚುವರಿ ಕಾರ್ಯದರ್ಶಿ ಹುದ್ದೆಗೆ ಬಡ್ತಿ ನೀಡಿದ್ದಾರೆ.
ಬೆಂಗಳೂರು ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ರಮೇಶ್ ಅವರು, ಕಳೆದ ಮೂರು ದಶಕಗಳಿಂದ ಸಂಸತ್ತಿನ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೆ ಲೋಕಸಭೆಯ ವಿವಿಧ ಇಲಾಖೆಗಳ ಪ್ರಕಟಣೆಗಳಿಗೆ ಸಹಾಯಕ ಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


