ಪ್ರಧಾನ ಸುದ್ದಿ

ಬಿಬಿಎಂಪಿ ಮೈತ್ರಿಗೆ ಭಂಗವಿಲ್ಲ: ಎಚ್.ಡಿ.ದೇವೇಗೌಡ

ಬಿಬಿಎಂಪಿಯಲ್ಲಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಇನ್ನು ಮುಂದೆ ಅಡ್ಡಿ ಆತಂಕಗಳು ಇರುವುದಿಲ್ಲ. ಬಿಬಿಎಂಪಿಯಲ್ಲಿ ಆಗಿರುವ ಕಾಂಗ್ರೆಸ್ ಜತೆಗಿನ ಮೈತ್ರಿ ಇನ್ನೂ 5 ವರ್ಷದವರೆಗೂ ಮುಂದುವರಿಯುತ್ತದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದ್ದಾರೆ ಎನ್ನಲಾಗಿದೆ...

ಬಿಬಿಎಂಪಿ ಮೈತ್ರಿಗೆ ಭಂಗವಿಲ್ಲ: ಎಚ್.ಡಿ.ದೇವೇಗೌಡ
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ
Published On :

ಬೆಂಗಳೂರು: ಬಿಬಿಎಂಪಿಯಲ್ಲಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಇನ್ನು ಮುಂದೆ ಅಡ್ಡಿ ಆತಂಕಗಳು ಇರುವುದಿಲ್ಲ. ಬಿಬಿಎಂಪಿಯಲ್ಲಿ ಆಗಿರುವ ಕಾಂಗ್ರೆಸ್ ಜತೆಗಿನ ಮೈತ್ರಿ ಇನ್ನೂ 5 ವರ್ಷದವರೆಗೂ ಮುಂದುವರಿಯುತ್ತದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದ್ದಾರೆ ಎನ್ನಲಾಗಿದೆ.

ಇದರೊಂದಿಗೆ ಬಿಬಿಎಂಪಿಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ನಿರಾತಂಕವಾಗಿ ಮುಂದುವರಿಯಲಿದೆ ಎನ್ನುವುದು ಸ್ಪಷ್ಟವಾದಂತಾಗಿದೆ. ಪಕ್ಷದೊಳಗಿನ ಭಿನ್ನಾಭಿಪ್ರಾಯ ಕುರಿತು ಚರ್ಚಿಸಲು ಬುಧವಾರ ನಡೆಸಿದ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರ ಆಕ್ರೋಶದ ಬಗ್ಗೆ ಚರ್ಚಿಸಲಾಯಿತು. ಆ ಸಂದರ್ಭದಲ್ಲಿ ಬಿಬಿಎಂಪಿಯಲ್ಲಿನ ಮೈತ್ರಿ ವಿಚಾರ ಪ್ರಸ್ತಾಪಕ್ಕೆ ಬಂದಾಗ, ದೇವೇಗೌಡರು ಕಾಂಗ್ರೆಸ್ ಮೈತ್ರಿಗೆ ಭಂಗವಿಲ್ಲ ಎಂದಿದ್ದಾರೆ.

ಇತ್ತೀಚಿಗೆ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಬಿಬಿಎಂಪಿಯಲ್ಲಿನ ಕಾಂಗ್ರೆಸ್ ಮೈತ್ರಿ ಬಗ್ಗೆ ಗುಡುಗಿದ್ದರು. ಕಾಂಗ್ರೆಸ್ ಅಸಹಕಾರ ಮುಂದುವರಿಸಿದರೆ ಮೈತ್ರಿ ಮುರಿದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದ್ದರು. ಇದರ ಬೆನ್ನಲ್ಲೇ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಜತೆಗಿನ ಮೈತ್ರಿ ಬೇಡ ಎಂದು ಜೆಡಿಎಸ್ ಹೇಳಿದೆ. ಇದು ಸಹಜವಾಗಿಯೇ ಬಿಬಿಎಂಪಿಯಲ್ಲಿನ ಮೈತ್ರಿ ವಿಚಾರದ ಬಗ್ಗೆ ಆತಂಕ ಉಂಟಾಗಿತ್ತು. ಹೀಗಾಗಿ ಬುಧವಾರದ ಸಭೆಯಲ್ಲಿ ಬಿಬಿಎಂಪಿನ ಮೈತ್ರಿ ಸಾಂದರ್ಭಿಕವಾಗಿ ಚರ್ಚೆಗೆ ಬಂದಾಗ, ದೇವೇಗೌಡರು, ಮೈತ್ರಿ ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಬೇರೆ ರಾಜ್ಯಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿರುವ ಉದಾಹರಣೆಗಳಿವೆ. ಇದು ಸ್ಥಳೀಯ ಆಡಳಿತದ ಸುಗಮಕ್ಕೆ ಅನಿವಾರ್ಯ ಕೂಡ. ಆದ್ದರಿಂದ ಬಿಬಿಎಂಪಿಯಲ್ಲಿ
ಕಾಂಗ್ರೆಸ್ ಜತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದು ವಿಶೇಷವೇನಲ್ಲ. ಆದ್ದರಿಂದ ಬಿಬಿಎಂಪಿಯಲ್ಲಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಇನ್ನೂ 5ವರ್ಷ ಮುಂದುವರಿಯಲಿದೆ. ಈ ಬಗ್ಗೆ ಯಾವುದೇ ಆಕ್ಷೇಪ ಎತ್ತುವುದು ಬೇಡ ಎಂದು ಗೌಡರು ಸೂಚಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.