ಜಲಪ್ರಳಯ: ಸಹಜ ಸ್ಥಿತಿಯತ್ತ ಚೆನ್ನೈ ವಿಮಾನ ನಿಲ್ದಾಣ
ಕುಂಭದ್ರೋಣ ಮಳೆಯಿಂದ ಅಕ್ಷರ ಸಹ ಕೆರೆಯಂತಾಗಿದ್ದ ಚೆನ್ನೈ ವಿಮಾನ ನಿಲ್ದಾಣ ನಿಧಾನವಾಗಿ ಚೆತರಿಸಿಕೊಳ್ಳುತ್ತಿದ್ದು, ಶೀಘ್ರವೇ ವಾಣಿಜ್ಯ ವಿಮಾನಗಳ...

ನವದೆಹಲಿ: ಕುಂಭದ್ರೋಣ ಮಳೆಯಿಂದ ಅಕ್ಷರ ಸಹ ಕೆರೆಯಂತಾಗಿದ್ದ ಚೆನ್ನೈ ವಿಮಾನ ನಿಲ್ದಾಣ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದು, ಶೀಘ್ರವೇ ವಾಣಿಜ್ಯ ವಿಮಾನಗಳ ಹಾರಾಟ ಆರಂಭವಾಗಲಿದೆ ಎಂದು ಕೇಂದ್ರ ವಿಮಾನಯಾನ ಖಾತೆ ರಾಜ್ಯ ಸಚಿವ ಮಹೇಶ ಶರ್ಮಾ ಅವರು ಶನಿವಾರ ಹೇಳಿದ್ದಾರೆ.
'ನಾವು ಈಗಾಗಲೇ ತಾಂತ್ರಿಕ ವಿಮಾನ ಹಾರಾಟವನ್ನು ಆರಂಭಿಸಿದ್ದೇವೆ. ಆದರೆ ಕೆಳಮಹಡಿಯಲ್ಲಿ ಇನ್ನೂ ನೀರು ತುಂಬಿಕೊಂಡಿದ್ದರಿಂದ ಮತ್ತು ಟರ್ಮಿನಲ್ ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ಇಲ್ಲದ ಕಾರಣ ಇನ್ನೂ ವಾಣಿಜ್ಯ ವಿಮಾನ ಹಾರಾಟ ಆರಂಭಿಸಿಲ್ಲ' ಎಂದು ಅವರು ತಿಳಿಸಿದರು.
ಇನ್ನು ಎರಡ್ಮೂರು ದಿನದಲ್ಲಿ ಚೆನ್ನೈ ವಿಮಾನ ನಿಲ್ದಾಣ ಸಂಪೂರ್ಣ ಸಹಜ ಸ್ಥಿತಿಗೆ ಬರಲಿದೆ. ಈಗ ಐಎನ್‌ಎಸ್ ರಜಲಿ ವಾಯು ನೆಲೆಯಿಂದ ನಾಲ್ಕು ವಾಣಿಜ್ಯ ವಿಮಾನಗಳು ಸಂಚಾರ ನಡೆಸುತ್ತಿವೆ ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.
ಶತಮಾನದ ಮಹಾಮಳೆಯಿಂದಾಗಿ ಕಳೆದ ಭಾನುವಾರದಿಂದ ಚೆನ್ನೈ ವಿಮಾನ ನಿಲ್ದಾಣದ ಎಲ್ಲಾ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


