ಮೋದಿ ವಿರುದ್ದ ಲಷ್ಕರ್ ದಾಳಿ ಸಂಚು ವಿಫಲಗೊಳಿಸಿದ ಗುಪ್ತಚರ ಇಲಾಖೆ
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ದಾಳಿ ನಡೆಸಲು ಉಗ್ರ ಸಂಘಟನೆಯಾದ ಲಷ್ಕರೆ ತೊಯ್ಬಾ ಸಂಚು ಹೂಡಿತ್ತು. ಆದರೆ ಈ ಸಂಚನ್ನು ಗುಪ್ತಚರ ಇಲಾಖೆ...

Published On :
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ದಾಳಿ ನಡೆಸಲು ಉಗ್ರ ಸಂಘಟನೆಯಾದ ಲಷ್ಕರೆ ತೊಯ್ಬಾ ಸಂಚು ಹೂಡಿತ್ತು. ಆದರೆ ಈ ಸಂಚನ್ನು ಗುಪ್ತಚರ ಇಲಾಖೆ ವಿಫಲಗೊಳಿಸಿದೆ ಎಂದು ಸುದ್ದಿಮೂಲಗಳಿಂದ ತಿಳಿದು ಬಂದಿದೆ.
ಮೋದಿ ಸೇರಿದಂತೆ ಹಲವು ಗಣ್ಯರ ಮೇಲೆ ದಾಳಿ ಮಾಡಲು ಲಷ್ಕರೆ ತೊಯ್ಬಾ ಸಂಚು ಹೂಡಿದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು. ಮೋದಿಯವರು ಭಾಗವಹಿಸುವ ಕಾರ್ಯಕ್ರಮಗಳಲ್ಲಿ 26/11 ರ ರೀತಿಯಲ್ಲಿ ದಾಳಿ ನಡೆಸಲು ಉಗ್ರರು ಯೋಜನೆ ರೂಪಿಸಿದ್ದರು ಎನ್ನಲಾಗುತ್ತಿದೆ.
ದೇಶದ ರಾಜಧಾನಿಯಲ್ಲಿ ಗಣ್ಯರಿಗೆ ಗುರಿಯಿಟ್ಟು ಉಗ್ರ ಕೃತ್ಯಗಳನ್ನು ನಡೆಸಲು 4 ಉಗ್ರರು ಭಾರತಕ್ಕೆ ನುಸುಳಿದ್ದಾರೆ ಎಂದು ದೆಹಲಿ ಪೊಲೀಸ್ ವಿಶೇಷ ಪಡೆ ಈ ಹಿಂದೆಯೇ ಮುನ್ನೆಚ್ಚರಿಕೆ ನೀಡಿತ್ತು. ಕಳೆದ ತಿಂಗಳು ಈ ಉಗ್ರರು ಭಾರತದೊಳಗೆ ನುಸುಳಿದ್ದರು. ಲಷ್ಕರೆ ಕಮಾಂಡರ್ ಅಬು ದುಜನ್ ಜತೆ ಇವರು ಸಂಪರ್ಕ ಹೊಂದಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ. ದುಜನ್, ಉಕಾಕ್ಷ ಎಂಬ ಹೆಸರಿರುವ ಇವರನ್ನು ಪತ್ತೆ ಹಚ್ಚುವ ಕ್ರಿಯೆ ಬಿರುಸಿನಿಂದ ಸಾಗಿದೆ.
ಅದೇ ವೇಳೆ ಡಿ. 6 ರಂದು ಬಾಬರಿ ಮಸೀದಿ ಧ್ವಂಸ ನಡೆದ ದಿನವಾಗಿರುವುದರಿಂದ ದೆಹಲಿಯಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


