ಪ್ರಧಾನ ಸುದ್ದಿ

ಟಿವಿಗಳಲ್ಲಿ ಜ್ಯೋತಿಷ್ಯ ಕಾರ್ಯಕ್ರಮ ಪ್ರಸಾರ ನಿರ್ಬಂಧಕ್ಕೆ ಚಿಂತನೆ: ಸಿಎಂ

ಮಾಧ್ಯಮಗಳಲ್ಲಿ ಜ್ಯೋತಿಷ್ಯ ಕಾರ್ಯಕ್ರಮ ಪ್ರಸಾರ ನಿರ್ಬಂಧಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಟಿವಿಗಳಲ್ಲಿ ಜ್ಯೋತಿಷ್ಯ ಕಾರ್ಯಕ್ರಮ ಪ್ರಸಾರ ನಿರ್ಬಂಧಕ್ಕೆ ಚಿಂತನೆ: ಸಿಎಂ
ಸಿದ್ದರಾಮಯ್ಯ
Published On :

ಬೆಂಗಳೂರು: ಟಿವಿಗಳಲ್ಲಿ ಜ್ಯೋತಿಷ್ಯ ಕಾರ್ಯಕ್ರಮ ಪ್ರಸಾರ ನಿರ್ಬಂಧಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.

ಇಂದು ನಗರದಲ್ಲಿ ಡಿ.ಜಿ.ಸಾಗರ್ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಎಲ್ಲಾ ಟಿವಿಗಳಲ್ಲೂ ಪ್ರತಿದಿನ ಜ್ಯೋತಿಷ್ಯ ಪ್ರಸಾರವಾಗುತ್ತದೆ. ಮಾಧ್ಯಮಗಳಲ್ಲಿ ಪ್ರಸಾರವಾಗುವ ಜ್ಯೋತಿಷ್ಯ ಕಾರ್ಯಕ್ರಮಗಳು ಮೌಢ್ಯವನ್ನು ಬಿತ್ತುತ್ತಿವೆ ಎಂದರು. ನಮ್ಮ ಮನೆಯ ಹೆಣ್ಣು ಮಕ್ಕಳು ಸಹ ಇದನ್ನೇ ನೋಡುತ್ತಾರೆ. ಮೊದಲ ಇದರ ಬಗ್ಗೆ ಜನ ಎಚ್ಚೆತ್ತುಕೋಳ್ಳಬೇಕು. ಹೀಗಾಗಿ ಜ್ಯೋತಿಷ್ಯ ಕಾರ್ಯಕ್ರಮ ನಿರ್ಬಂಧಕ್ಕೆ ಚಿಂತನೆ ನಡೆದಿದೆ ಎಂದರು.

ಸಮಾಜದಲ್ಲಿ ಮೌಢ್ಯ ಹಾಗೂ ಕಂದಾಚಾರಗಳ ಬಗ್ಗೆ ಜಾಗೃತಿ ಮೂಡಿಸುವ ಅಗತ್ಯ ಇದೆ ಎಂದು ಸಿಎಂ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.