ಭ್ರಷ್ಟಾಚಾರ ಆರೋಪ: ಕೊನೆಗೂ ಲೋಕಾಯುಕ್ತ ಭಾಸ್ಕರ ರಾವ್ ರಾಜೀನಾಮೆ
ಲೋಕಾಯುಕ್ತ ಸಂಸ್ಥೆಯಲ್ಲಿ ಭಾರೀ ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದ ಹಿನ್ನೆಲೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಭಾಸ್ಕರ್ ರಾವ್...

ಬೆಂಗಳೂರು: ಲೋಕಾಯುಕ್ತ ಸಂಸ್ಥೆಯಲ್ಲಿ ಭಾರೀ ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದ ಹಿನ್ನೆಲೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಭಾಸ್ಕರ್ ರಾವ್ ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ರಾಜ್ಯಪಾಲ ವಜೂಬಾಯಿ ವಾಲಾ ಅವರು ಲೋಕಾಯುಕ್ತರ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. 135 ದಿನಗಳ ದೀರ್ಘ ರಜೆಯ ಬಳಿಕ ಅವರು ರಾಜೀನಾಮೆ ನೀಡಿದ್ದಾರೆ. ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು ಲೋಕಾಯುಕ್ತರ ರಾಜೀನಾಮೆಯನ್ನು ಅಧಿಕೃತವಾಗಿ ಘೋಷಿಸಿದ್ದಾರೆ.
'ನಿನ್ನೆ ಭಾಸ್ಕರ್ ರಾವ್ ಅವರನ್ನು ಲೋಕಾಯುಕ್ತ ಸ್ಥಾನದಿಂದ ಪದಚ್ಯುತಗೊಳಿಸಲು ವಿಧಾನ ಮಂಡಲದ ಉಭಯ ಸದನಗಳಲ್ಲಿ ನಿರ್ಣಯ ಮಂಡಿಸಲಾಯಿತು. ನಿರ್ಣಯವನ್ನು ಅಂಗೀಕರಿಸಲಾಗಿದೆ ಎಂಬ ಅಧಿಕೃತ ಸಂದೇಶವನ್ನು ರಾವ್ ಅವರಿಗೆ ರವಾನಿಸಲಾಗಿದೆ' ಎಂದು ಲೋಕಾಯುಕ್ತ ಮೂಲಗಳು ತಿಳಿಸಿದ್ದವು.
ಲೋಕಾಯುಕ್ತ ನ್ಯಾಯಮೂರ್ತಿ ವಿ.ಭಾಸ್ಕರ ರಾವ್ ಅವರು ತಮ್ಮ ರಾಜೀನಾಮೆಯನ್ನು ರಿಜಿಸ್ಟ್ರಾರ್ ಬಾಲಕೃಷ್ಣ ಅವರ ಮೂಲಕ ಪತ್ರವನ್ನು ರಾಜ್ಯಪಾಲ ವಜೂಭಾಯಿವಾಲಾ ಅವರಿಗೆ ರವಾನಿಸಿದ್ದಾರೆ. ನ್ಯಾ.ಭಾಸ್ಕರ ರಾವ್ ಅವರ ರಾಜೀನಾಮೆಯನ್ನು ರಾಜ್ಯಪಾಲರು ಅಂಗೀಕರಿಸಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಲೋಕಾಯುಕ್ತದಲ್ಲಿ ಪುತ್ರ ಅಶ್ವಿನ್ ರಾವ್ ಅವರಿಂದ ನಡೆದಿದೆ ಎನ್ನಲಾದ ಡೀಲ್ ಪ್ರಕರಣ ಸಾರ್ವಜನಿಕವಾಗಿ ಹಾಗೂ ರಾಜಕೀಯವಾಗಿ ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಲೋಕಾಯುಕ್ತ ನ್ಯಾ.ಭಾಸ್ಕರರಾವ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕೆಂದು ಪ್ರತಿಪಕ್ಷಗಳು ಒತ್ತಾಯಿಸಿದ್ದವು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


