ಪ್ರಧಾನ ಸುದ್ದಿ

ಪ್ರಧಾನಿ ಮೋದಿಯನ್ನು ಹಾಡಿ ಹೊಗಳಿದ ಮಾಜಿ ಪ್ರಧಾನಿ ದೇವೇಗೌಡ

ಕಳೆದ ಲೋಕಸಭೆ ಚುನಾವಣೆ ವೇಳೆ ಮೋದಿ ಪ್ರಧಾನಿಯಾದ್ರೆ ಕರ್ನಾಟಕ ತೊರೆಯುತ್ತೇನೆ ಎಂದಿದ್ದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಷ್ಠ ದೇವೇಗೌಡ...

ಪ್ರಧಾನಿ ಮೋದಿಯನ್ನು ಹಾಡಿ ಹೊಗಳಿದ ಮಾಜಿ ಪ್ರಧಾನಿ ದೇವೇಗೌಡ
ಎಚ್.ಡಿ.ದೇವೇಗೌಡ - ನರೇಂದ್ರ ಮೋದಿ
Published On :

ಬೆಂಗಳೂರು: ಕಳೆದ ಲೋಕಸಭೆ ಚುನಾವಣೆ ವೇಳೆ ಮೋದಿ ಪ್ರಧಾನಿಯಾದ್ರೆ ಕರ್ನಾಟಕ ತೊರೆಯುತ್ತೇನೆ ಎಂದಿದ್ದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಷ್ಠ ದೇವೇಗೌಡ ಅವರು ಈಗ ಅದೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಾಡಿ ಹೊಗಳಿದ್ದಾರೆ.

ನಿನ್ನೆಯಷ್ಟೇ ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿ ಮಾಡಿ ಬಂದಿದ್ದ ದೇವೇಗೌಡ ಅವರು ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ದೇಶದಲ್ಲಿ ಒಳ್ಳೆಯ ವಾತಾವರಣ ಸೃಷ್ಟಿಯಾಗುತ್ತಿದೆ. ಪ್ರಧಾನಿ ಮೋದಿ ಡೌನ್ ಟು ಅರ್ಥ್ ಇದ್ದಾರೆ ಎಂದರು.

ಹೊರ ದೇಶಗಳಿಂದ ಭಾರತಕ್ಕೆ ಬಂಡವಾಳ ಬರಬೇಕಾದರೆ ದೇಶದಲ್ಲಿ ಅದಕ್ಕೆ ಪೂರಕವಾದ ವಾತಾವರಣ ಇರಬೇಕಾಗುತ್ತದೆ. ಹೀಗಾಗಿ ಮೋದಿ ವಿದೇಶಗಳಿಗೆ ಭೇಟಿ ನೀಡುತ್ತಿದ್ದಾರೆ ಮತ್ತು ದೇಶದಲ್ಲಿ ಬಂಡವಾಳ ಹೂಡಿಕೆಗೆ ಸೂಕ್ತ ವಾತಾವರಣ ಸೃಷ್ಟಿಸುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಹಾಲಿ ಪ್ರಧಾನಿಯ ವಿದೇಶ ಪ್ರವಾಸವನ್ನು ಸಮರ್ಥಿಸಿಕೊಂಡರು.

ಇದೇ ವೇಳೆ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಮೈಸರೂ, ಮಂಡ್ಯ ಹಾಗೂ ಕೋಲಾರ ಬಂಡಾಯ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂಪೆಡಿದ್ದು, ಬಂಡಾಯ ಶಮನಕ್ಕೆ ಶ್ರಮಿಸಿದ ಎಲ್ಲರಿಗೂ ಧನ್ಯವಾದ ಎಂದರು. ಅಲ್ಲದೆ ಚುನಾವಣೆಯಲ್ಲಿ ಜೆಡಿಎಸ್ 10ರಿಂದ 12 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಮಾಜಿ ಪ್ರಧಾನಿ ವಿಶ್ವಾಸ ವ್ಯಕ್ತಪಡಿಸಿದರು.

ರಾಷ್ಟ್ರೀಯ ಪಕ್ಷಗಳ ಎದುರು ಹಣ ಬಲದಿಂದ ಗೆಲ್ಲಲಾಗಲ್ಲ. ಹಾಗಂತ ಜೆಡಿಎಸ್ ಅಭ್ಯರ್ಥಿಗಳಿಗೆ ಗೆಲ್ಲುವ ಶಕ್ತಿ ಇಲ್ಲವೆಂದಲ್ಲ. ಐಕ್ಯತೆಯಿಂದ 10ರಿಂದ 12 ಕ್ಷೇತ್ರಗಳಲ್ಲಿ ಗೆಲುವು ಸಾಧ್ಯ ಎಂದರು.

ಪ್ರಧಾನಿ ಮೋದಿ ಅವರನ್ನು ಶುಕ್ರವಾರ ಸಂಸತ್‌ ಭವನದಲ್ಲಿ  ಭೇಟಿ ಮಾಡಿದ್ದ ಮಾಜಿ ಪ್ರಧಾನಿ ಸುಮಾರು 15 ನಿಮಿಷ ಮಾತುಕತೆ ನಡೆಸಿದರು. ಉತ್ತರ ಕರ್ನಾಟಕದಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆ, ರೈತರ ಆತ್ಮಹತ್ಯೆ ಪ್ರಕರಣಗಳು ಹಾಗೂ  14ನೇ ಹಣಕಾಸು ಯೋಜನೆಯಲ್ಲಿ ನಿಗದಿಪಡಿಸಿರುವ ಅನುದಾನ ಮೊದಲಾದ ವಿಷಯಗಳನ್ನು ಕುರಿತು ಅವರು ಚರ್ಚಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.