ಪ್ರಧಾನ ಸುದ್ದಿ

ಮೋದಿ ಜೊತೆ ಗಂಗಾ ಆರತಿಯಲ್ಲಿ ಪಾಲ್ಗೊಂಡ ಜಪಾನ್ ಪ್ರಧಾನಿ ಅಬೆ

ಮೂರು ದಿನಗಳ ಭಾರತ ಪ್ರವಾಸದಲ್ಲಿರುವ ಜಪಾನ್ ಪ್ರಧಾನಿ ಶಿಂಜೊ ಅಬೆ ಅವರು ಶನಿವಾರ ಪ್ರಧಾನಿ ನರೇಂದ್ರ ಮೋದಿ ಜೊತೆ ಅವರ ಸ್ವಕ್ಷೇತ್ರ ವಾರಾಣಸಿಯಲ್ಲಿ...

ಮೋದಿ ಜೊತೆ ಗಂಗಾ ಆರತಿಯಲ್ಲಿ ಪಾಲ್ಗೊಂಡ ಜಪಾನ್ ಪ್ರಧಾನಿ ಅಬೆ
ಗಂಗಾ ಆರತಿ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ, ಜಪಾನ್ ಪ್ರಧಾನಿ ಶಿಂಜೊ ಅಬೆ
Published On :

ವಾರಾಣಸಿ: ಮೂರು ದಿನಗಳ ಭಾರತ ಪ್ರವಾಸದಲ್ಲಿರುವ ಜಪಾನ್ ಪ್ರಧಾನಿ ಶಿಂಜೊ ಅಬೆ ಅವರು ಶನಿವಾರ ಪ್ರಧಾನಿ ನರೇಂದ್ರ ಮೋದಿ ಜೊತೆ ಅವರ ಸ್ವಕ್ಷೇತ್ರ ವಾರಾಣಸಿಯಲ್ಲಿ ಪ್ರಸಿದ್ಧ ಗಂಗಾ ಆರತಿಯಲ್ಲಿ ಪಾಲ್ಗೊಂಡು, ಗಂಗಾ ನದಿಗೆ ವಿಶೇಷ ಪೂಜೆ ಸಲ್ಲಿಸಿದರು.

ದಶಾಶ್ವಮೇಧ ಘಾಟನಲ್ಲಿ ನಡೆದ ಗಂಗಾ ಆರತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮೋದಿ ಹಾಗೂ ಅಬೆ ಗಂಗಾ ನದಿಗೆ ವಿಶೇಷ ಪೂಜೆ ಸಲ್ಲಿಸಿದರು.

ಜಪಾನ್ ಪ್ರಧಾನಿಯ ಕಾಶಿ ಪ್ರವಾಸದಿಂದಾಗಿ ಉಭಯ ದೇಶಗಳ ನಡುವಿನ ಶತಮಾನಗಳಷ್ಟು ಹಳೆಯದಾದ ಬಾಂಧವ್ಯದಲ್ಲಿ ಹೊಸದೊಂದು ಅಧ್ಯಾಯ ಪ್ರಾರಂಭವಾಗಲಿದೆ ಎಂದು ಭಾವಿಸಲಾಗಿದೆ.

ಅಬೆ ಅವರು ಸುಮಾರು ನಾಲ್ಕೂವರೆ ತಾಸುಗಳನ್ನು ವಾರಾಣಸಿಯಲ್ಲಿ ಕಳೆಯಲಿರುವ ಹಿನ್ನೆಲೆಯಲ್ಲಿ ಗಂಗಾನದಿಯ ತಟದಲ್ಲಿ ತಾತ್ಕಾಲಿಕ ವೇದಿಕೆ ನಿರ್ಮಿಸಲಾಗಿದೆ. ಭದ್ರತೆಗಾಗಿ ಸೇನೆ ಹಾಗೂ ನೌಕಾ ಸಿಬ್ಬಂದಿ ನಿಯೋಜಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.