ಹಿರಿಯ ಕವಿ ಕೆ.ವಿ ತಿರುಮಲೇಶ್‌ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಕನ್ನಡದ ಹಿರಿಯ ಕವಿ, ವಿಮರ್ಶಕ, ಕಾದಂಬರಿಕಾರ ಕೆ.ವಿ.ತಿರುಮಲೇಶ್ ಅವರು 2015ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆ...

ಬೆಂಗಳೂರು: ಕನ್ನಡದ ಹಿರಿಯ ಕವಿ, ವಿಮರ್ಶಕ, ಕಾದಂಬರಿಕಾರ ಕೆ.ವಿ.ತಿರುಮಲೇಶ್ ಅವರು 2015ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ತಿರುಮಲೇಶ್ ಅವರ ‘ಅಕ್ಷಯ ಕಾವ್ಯ’ ಕೃತಿಗೆ ಈ ಪ್ರಶಸ್ತಿ ನೀಡಲಾಗುತ್ತಿದ್ದು, ಪ್ರಶಸ್ತಿ 1 ಲಕ್ಷ ರುಪಾಯಿ ನಗದು ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ.
‘ಅಕ್ಷಯ ಕಾವ್ಯ’ ತಿರುಮಲೇಶ್ ಅವರ ಮಹತ್ವಾಕಾಂಕ್ಷೆಯ ಕೃತಿಯಾಗಿದ್ದು, ಇದು ‘ಆಧುನಿಕ ಮಹಾಕಾವ್ಯ’ದ ವಿಸ್ತಾರವನ್ನು ಒಳಗೊಂಡಿದೆ. ಲೋಕದ ಅನುಭವಗಳನ್ನು ಗಂಡು ಹೆಣ್ಣಿನ ರೂಪಕಗಳ ಮೂಲಕ ಗ್ರಹಿಸುವ ಪ್ರಯತ್ನ ಹಾಗೂ ಬೇರೆ ಬೇರೆ ಲಯಗಳು ಬಳಕೆಯಾಗಿರುವ ವಿಶಿಷ್ಟ ಕಾವ್ಯಪ್ರಯೋಗ ಇದಾಗಿದೆ.
೧೯೪೦ರಲ್ಲಿ ಕಾಸರಗೋಡು ಜಿಲ್ಲೆಯ ಕಾರಡ್ಕ ಎಂಬ ಗ್ರಾಮದಲ್ಲಿ ಜನಿಸಿದ ಕೆ ವಿ ತಿರುಮಲೇಶ್ ಅವರು ಕನ್ನಡದ ಪ್ರಮುಖ ಕವಿ ಮತ್ತು ವಿಮರ್ಶಕರಲ್ಲೊಬ್ಬರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


