ಪ್ರಧಾನ ಸುದ್ದಿ

ಸಂಚಾರ ದಟ್ಟಣೆ: ದೆಹಲಿಯಂತೆ ಬೆಂಗಳರಿನಲ್ಲೂ ಕಠಿಣ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲವೇ? ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ

ಮಿತಿಮೀರಿದ ಸಿಲಿಕಾನ್ ಸಿಟಿಯ ಸಂಚಾರ ದಟ್ಟಣೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್, ದೆಹಲಿಯಂತೆ ನಗರದಲ್ಲೂ ಕಠಿಣ ಕ್ರಮ ಕೈಗೊಳ್ಳಲು...

ಸಂಚಾರ ದಟ್ಟಣೆ: ದೆಹಲಿಯಂತೆ ಬೆಂಗಳರಿನಲ್ಲೂ ಕಠಿಣ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲವೇ? ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ
ಹೈಕೋರ್ಟ್
Published On :

ಬೆಂಗಳೂರು: ಮಿತಿಮೀರಿದ ಸಿಲಿಕಾನ್ ಸಿಟಿಯ ಸಂಚಾರ ದಟ್ಟಣೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್, ದೆಹಲಿಯಂತೆ ನಗರದಲ್ಲೂ ಕಠಿಣ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲವೇ?ಎಂದು ಶುಕ್ರವಾರ ಸರ್ಕಾರವನ್ನು ಪ್ರಶ್ನಿಸಿದೆ.

ಪ್ರತಿದಿನ ರಸ್ತೆ ಸಂಚಾರದಲ್ಲೇ ಎರಡರಿಂದ ಮೂರು ಗಂಟೆ ವ್ಯರ್ಥವಾಗುತ್ತಿದೆ. ಸಾಕಷ್ಟು ಮಾನವ ಸಂಪನ್ಯೂಲ ಇದ್ದರೂ ಸದ್ಬಳಕೆಯಾಗದ ಸ್ಥಿತಿಯಿದೆ ಎಂದು ನ್ಯಾ.ಎ.ಎನ್.ವೇಣುಗೋಪಾಲಗೌಡ ಅವರು ಅಭಿಪ್ರಾಯ ಪಟ್ಟಿದ್ದಾರೆ.

ದೆಹಲಿಯಲ್ಲಿ ಹತ್ತು ಜನರ ಪೈಕಿ ಒಬ್ಬರಿಗೆ ಅಸ್ತಮಾ ಇದೆ. ಬೆಂಗಳೂರಿನ ಸ್ಥಿತಿ ಕೈಮೀರುವ ಮುನ್ನ ಎಚ್ಚೆತ್ತುಕೊಳ್ಳಬೇಕು. ರಸ್ತೆ ಸುಧಾರಣೆ ಮತ್ತು ಸಾರ್ವಜನಿಕ ಸಾರಿಗೆ ಸುಧಾರಣೆಯ ಅಗತ್ಯ ಇದೆ ಎಂದು ಹೈಕೋರ್ಟ್ ಸರ್ಕಾರವನ್ನು ಎಚ್ಚರಿಸಿದೆ. ಅಲ್ಲದೆ ಸಂಚಾರ ದಟ್ಟಣೆ ನಿಯಂತ್ರಣ ಸಂಬಂಧ ಸರ್ಕಾರದ ಕಾರ್ಯಯೋಜನೆ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದೆ.

ಈ ವೇಳೆ ಸರ್ಕಾರದ ಕ್ರಮಗಳ ಬಗ್ಗೆ ವಿವರ ನೀಡಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಪೊನ್ನಣ್ಣ ಅವರು, ಡೀಸೆಲ್ ವಾಹನಗಳ ನೋಂದಣಿ ನಿರ್ಬಂದ ಕೋರಿ 2014ರಲ್ಲೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಹಗಲಿನಲ್ಲಿ ಭಾರೀ ವಾಹನ ಪ್ರವೇಶ ನಿರ್ಬಂಧಿಸಲಾಗಿದ್ದು, ಮುಂದೆ ಹೈಕೋರ್ಟ್ ಸಲಹೆಯಂತೆ ಕಾರ್ಯನಿರ್ವಹಿಸಲು ಸಿದ್ಧ ಎಂದರು. ಬಳಿಕ ಕೋರ್ಟ್ ವಿಚಾರಣೆಯನ್ನು ಜನವರಿ 6ಕ್ಕೆ ಮುಂದೂಡಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.