ಪ್ರಧಾನ ಸುದ್ದಿ

ಡಿನೋಟಿಫಿಕೇಷನ್ ಬಿಎಸ್‍ವೈ ವಿರುದ್ಧ ಮತ್ತೊಂದು ಎಫ್ಐಆರ್

ಬೆಂಗಳೂರು ಉತ್ತರ ತಾಲೂಕಿನ ಕಸಬಾ ಹೋಬಳಿ ಕಾಚರಕನಹಳ್ಳಿಯಲ್ಲಿ 1 ಎಕರೆ ಡಿನೋಟಿಫಿಕೇಷನ್ ಮಾಡಿದ ಪ್ರಕರಣವೊಂದರಲ್ಲಿ ಪ್ರಾಥಮಿಕ ತನಿಖೆ...

ಡಿನೋಟಿಫಿಕೇಷನ್ ಬಿಎಸ್‍ವೈ ವಿರುದ್ಧ ಮತ್ತೊಂದು ಎಫ್ಐಆರ್
ಬಿಎಸ್ ಯಡಿಯೂರಪ್ಪ
Published On :

ಬೆಂಗಳೂರು: ಬೆಂಗಳೂರು ಉತ್ತರ ತಾಲೂಕಿನ ಕಸಬಾ ಹೋಬಳಿ ಕಾಚರಕನಹಳ್ಳಿಯಲ್ಲಿ 1 ಎಕರೆ ಡಿನೋಟಿಫಿಕೇಷನ್ ಮಾಡಿದ ಪ್ರಕರಣವೊಂದರಲ್ಲಿ ಪ್ರಾಥಮಿಕ ತನಿಖೆ ಪೂರ್ಣಗೊಳಿಸಿದ್ದ ಲೋಕಾಯುಕ್ತ ಪೊಲೀಸರು ಶುಕ್ರವಾರ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಿಸಿದ್ದಾರೆ.

ಬೆಂಗಳೂರಿನ ಎಚ್‍ಬಿಆರ್ ಬಡಾವಣೆಯ ಒಂದನೇ ಹಂತಕ್ಕೆ ಬಿಡಿಎ ಸ್ವಾಧೀನಪಡಿಸಿಕೊಂಡಿದ್ದ ಒಟ್ಟು 8 ಎಕರೆಯಲ್ಲಿ 1 ಎಕರೆಯನ್ನ ಡಿನೋಟಿಪಿs ಕೇಷನ್ ಮಾಡಿರುವ ಪ್ರಕರಣ ಇದಾಗಿದೆ. ಯಡಿ ಯೂರಪ್ಪ ವಿರುದ್ಧ ಇದು 15ನೇ ಎಫ್ಐಆರ್.

ಡಿನೋಟಿಫಿಕೇಷನ್ ಪ್ರಕರಣಗಳ ಸಂಬಂಧ ಸಿಎಜಿ ನೀಡಿದ್ದ ವರದಿ ಆಧರಿಸಿ ಜಯಕುಮಾರ್ ಹಿರೇ ಮಠ್ ಎಂಬುವರು ಸಲ್ಲಿಸಿದ್ದ ದೂರು ಆಧರಿಸಿ ಪ್ರಾಥಮಿಕ ತನಿಖೆ ಪೂರ್ಣಗೊಳಿಸಿದ್ದ ಲೋಕಾ ಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಈ ಬಗ್ಗೆ ಲೋಕಾಯುಕ್ತ ಪೊಲೀಸ್ ಉನ್ನತ ಮೂಲಗಳು ಖಚಿತಪಡಿಸಿವೆ. ಹೊಸದಾಗಿ ದಾಖ ಲಿಸಿರುವ ಎಫ್ಐಆರ್ ನಲ್ಲಿ ಯಡಿಯೂರಪ್ಪ ಹಾಗೂ ಇತರರನ್ನು ಆರೋಪಿಗಳನ್ನಾಗಿ ಮಾಡಲಾ ಗಿದೆ. ಭ್ರಷ್ಟಾಚಾರ ತಡೆ ಕಾಯ್ಕೆಯ 13(1)(ಡಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.