ಹುಬ್ಬಳ್ಳಿಯಲ್ಲಿ ಹಳಿ ತಪ್ಪಿದ ಚಾಲುಕ್ಯ ಎಕ್ಸ್ಪ್ರೆಸ್
ಹುಬ್ಬಳ್ಳಿಯ ಉಣಕಲ್ ಬಳಿ ಚಾಲುಕ್ಯ ಎಕ್ಸ್ ಪ್ರೆಸ್ ರೈಲಿನ ಎರಡು ಬೋಗಿಗಳು ಹಳಿತಪ್ಪಿದ ಘಟನೆ ಸೋಮವಾರ ನಡೆದಿದ್ದು,...

ಹುಬ್ಬಳ್ಳಿ: ಹುಬ್ಬಳ್ಳಿಯ ಉಣಕಲ್ ಬಳಿ ಚಾಲುಕ್ಯ ಎಕ್ಸ್ ಪ್ರೆಸ್ ರೈಲಿನ ಎರಡು ಬೋಗಿಗಳು ಹಳಿತಪ್ಪಿದ ಘಟನೆ ಸೋಮವಾರ ನಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಹಳಿ ಬದಲಾವಣೆ ವೇಳೆ ಮೈಸೂರಿನಿಂದ ದಾದರ್ ಗೆ ತೆರಳುತ್ತಿದ್ದ ಚಾಲುಕ್ಯ ಎಕ್ಸ್ ಪ್ರೆಸ್ ರೈಲಿನ ಬೋಗಿಗಳು ಹಳಿ ತಪ್ಪಿದ ಅವಘಡ ನಡೆದಿದ್ದು,ರೈಲಿನ ಇಂಜಿನ್ ಹಿಂಭಾಗದಲ್ಲಿರುವ ಎರಡು ಜನರಲ್ ಬೋಗಿಗಳು ಹಳಿ ತಪ್ಪಿವೆ ಎನ್ನಲಾಗಿದೆ.
ಘಟನೆಯಿಂಧ ಬೋಗಿಗಳು ಜಖಂಗೊಂಡಿದ್ದು, ಬೋಗಿಗಳಲ್ಲಿ ಪ್ರಯಾಣಿಕರು ಇಲ್ಲದಿದ್ದರಿಂದ ಸಧ್ಯ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.ಇದರಿಂದ ಬಾರಿ ಅನಾಹುತ ತಪ್ಪಿದೆ.
ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


